Breaking News

ಕೊವಿಡ್-19: ಕರ್ನಾಟಕದಲ್ಲಿ ಮತ್ತೆ ಹೆಚ್ಚಿದ ಸೋಂಕಿತರು

Spread the love

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಇಂದು ಸಾಯಂಕಾಲ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕರ್ನಾಕದಲ್ಲಿ ಇಂದು ಕೊರೊನಾ ಸೋಂಕಿನಿಂದ 75 ಜನ ಮರಣವನ್ನಪ್ಪಿದ್ದಾರೆ ಮತ್ತು ಹೊಸದಾಗಿ 9,265 ಜನರಲ್ಲಿ ಸೋಂಕು ದೃಢಪಟ್ಟಿದೆ . ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,35,371 ಕ್ಕೇರಿದ್ದು ಇದುವರೆಗೆ ಬಲಿಯಾದವರ ಸಂಖ್ಯೆ 10,198 ತಲುಪಿದೆ. ಸೋಂಕಿತರ ಪೈಕಿ 6,11,167 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ 1,13,987 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .

ಹಾಗೆಯೇ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 27 ಜನರ ಬಲಿಯಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 4,574 ಜನರಲ್ಲಿ ಸೋಂಕು ಪತ್ತಯಾಗಿದೆ ನಗರದಲ್ಲಿ ಮಹಾಮಾರಿಯಿಂದ ಈವರೆಗೆ 3,417 ಸಾವನ್ನಪ್ಪಿದ್ದು ಸೋಂಕಿತರ ಸಂಖ್ಯೆ 2,93,405 ಕ್ಕೇರಿದೆ .

ಸೋಂಕಿತರ ಪೈಕಿ 2,24,942 ಜನ ಗುಣಮುಖರಾಗಿದ್ದಾರೆ ಮತ್ತು ಉಳಿದ 65,045 ಜನರಿಗೆ ಕೊವಿಡ್ ಕೇರ್ ಸೆಂಟರ್​ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ