ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್ ಮೂಲಕ ಮಾಹಿತಿ ಪಡೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ಈಗಾಗಲೇ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಣ ಕೂಡ ಬಿಡುಗಡೆ ಮಾಡಲಾಗಿದೆ. ಪ್ರವಾಹ ಪರಿಸ್ಥಿತಿ ಸ್ಥಳಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೂ ಸೂಚನೆ ನೀಡಿದ್ದೇನೆ. ಅದರಂತೆ ಸಚಿವರು ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲಿದ್ದಾರೆ ಎಂದರು.
Laxmi News 24×7