ಹೊಸದಿಲ್ಲಿ : ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಕೋರಿ ಜಿ.ಎಸ್. ಮಣಿ ಹಾಗೂ ಪ್ರದೀಪ್ ಕುಮಾರ್ ಯಾದವ್ ಎಂಬ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ಹಾಲಿ ನ್ಯಾಯಾಧೀಶರಾದ ಜಸ್ಟಿಸ್ ಎನ್.ವಿ. ರಮಣ ವಿರುದ್ಧ ಸಿಎಂ ಹಗರಣದ ಆರೋಪ ಹೊರಿಸಿರುವ ಹಿನ್ನೆಲೆಯಲ್ಲಿ ಅರ್ಜಿ ಅಲ್ಲಿಸಿದ್ದಾರೆ.
ಜಗನ್ ರೆಡ್ಡಿ ಸ್ವಯಂ ಅಕ್ರಮ ಹಣ ವರ್ಗಾವಣೆ ಹಾಗೂ ಭ್ರಷ್ಟಾಚಾರ ಸೇರಿ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಹಾಲಿ ನ್ಯಾಯಾಧೀಶರ ವಿರುದ್ಧ ಸಾರ್ವಜನಿಕವಾಗಿ ಮಾಧ್ಯಮಗಳಲ್ಲಿ ತನ್ನ ಸಾಂವಿಧಾನಿಕ ಹುದ್ದೆಯನ್ನು ಬಳಸಿಕೊಂಡು ತಪ್ಪು,ಅಸ್ಪಷ್ಟ, ರಾಜಕೀಯ ಹಾಗೂ ಹಗರಣದ ಹೇಳಿಕೆ ನೀಡಿದ್ದಾರೆ.
ರೆಡ್ಡಿ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅನರ್ಹರೆಂದು ಪರಿಗಣಿಸಬೇಕೆಂದು ಪಿಐಎಲ್‌ನಲ್ಲಿ ಆಗ್ರಹಿಸಲಾಗಿದೆ.
Laxmi News 24×7