ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಇಂದೂ ಸಹ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಸಲಾಗಿದೆ. ಮಹಾರಾಷ್ಟ್ರ ಹಾಗೂ ರಾಜ್ಯದಲ್ಲಿ ಸತತ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟ ಹೆಚ್ಚಳವಾಗಿದೆ.
ಇನ್ನು ಮಲೆನಾಡಿನಲ್ಲಿ ಮಳೆ ಮುಂದುವರೆದಿದ್ದು, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ರಂಜದಕಟ್ಟೆ ಬಳಿಯ ಬಿಂತಲಹಳ್ಳದ ಸೇತುವೆ ಮತ್ತೆ ಕುಸಿದು ಆಗುಂಬೆ ಸಂಚಾರ ಸ್ಥಗಿತಗೊಂಡಿದೆ.