Breaking News

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು,

Spread the love

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ಹೈಕೋರ್ಟ್ ಏಕಸದಸ್ಯ ಪೀಠದಿಂದ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದ್ದು, ಮೀಸಲಾತಿ ಪರಿಶೀಲನೆಗೆ ಎಎಜಿ ಧ್ಯಾನ್ ಚಿನ್ನಪ್ಪ, ಹಿರಿಯ ವಕೀಲ ಎ.ಎಸ್. ಪೊನ್ನಣ್ಣ, ರಾಜ್ಯ ಚುನಾವಣಾ ಆಯೋಗದ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಅವರನ್ನೊಳಗೊಂಡ ಸಮೀತಿಯನ್ನು ರಚಿಸಲಾಗಿದ್ದು, ಅಕ್ಟೋಬರ್ 22 ರಂದು ವರದಿ ನೀಡಲು ಹೈಕೋರ್ಟ್ ಸೂಚನೆ ನೀಡಿದೆ.

ಹಾಸನ ನಗರಸಭೆ ಅಧ್ಯಕ್ಷ ಸ್ಥಾನವನ್ನು ಎಸ್ ಟಿ ವರ್ಗಕ್ಕೆ ಮೀಸಲಿರಿಸಿರುವುದನ್ನು ಪ್ರಶ್ನಿಸಿ ಎಚ್.ವಿ ಚಂದ್ರೇಗೌಡ ಸೇರಿ 21 ಚುನಾಯಿತ ಸದಸ್ಯರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಎಲ್ಲ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ ಅಧಿಸೂಚನೆಗೆ ತಡೆಯಾಜ್ಞೆ ನೀಡಿದೆ.


Spread the love

About Laxminews 24x7

Check Also

ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

Spread the loveನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಇಂಧನ ಪೂರೈಕೆಯಲ್ಲಿ ಅಡಚಣೆ ಉಂಟಾದರೆ ಭಾರತಕ್ಕೆ  ಕಚ್ಚಾ ತೈಲ ಪೂರೈಸಲು ನಾವು ಸಿದ್ದರಿದ್ದೇವೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ