Breaking News

25 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌

Spread the love

ಬೆಳಗಾವಿ: ‘ಕಲ್ಯಾಣ ಹಾಗೂ ಮುಂಬೈ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖುದ್ದು ವೀಕ್ಷಿಸಬೇಕು ಮತ್ತು ಸಂತ್ರಸ್ತರ ನೆರವಿಗೆ ₹ 25 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌ ಒತ್ತಾಯಿಸಿದರು.

ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಶುಕ್ರವಾರ ‍ಪ್ರತಿಭಟನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

‘ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಭಾರಿ ಹಾನಿಯಾಗಿದೆ. ಆದರೆ, ಕೇಂದ್ರ ಸರ್ಕಾರದಿಂದ ಪರಿಹಾರ ಸಿಕ್ಕಿಲ್ಲ’ ಎಂದು ದೂರಿದರು.

‘ಸಂತ್ರಸ್ತರು ಸಂಕಷ್ಟಕ್ಕೆ ಒಳಗಗಾಗಿದ್ದಾರೆ. ಬೇರೆ ರಾಜ್ಯಗಳಲ್ಲಿ ಪ್ರವಾಹ ಉಂಟಾದರೆ ಪ್ರಧಾನಿ ಅಲ್ಲಿಗೆ ಹೋಗಿ ವೀಕ್ಷಿಸುತ್ತಾರೆ.

ಕೂಡಲೇ ಪರಿಹಾರ ಕೊಡುತ್ತಾರೆ. ಆದರೆ, ಕರ್ನಾಟಕವನ್ನು ಕಡೆಗಣಿಸುತ್ತಿದ್ದಾರೆ. ಈ ಬಗ್ಗೆ ಶಾಸಕರು, ಸಚಿವರು, ಸಂಸದರು ದನಿ ಎತ್ತುತ್ತಿಲ್ಲ’ ಎಂದು ಆರೋಪಿಸಿದರು.

‘ಪ್ರಧಾನಿ ಇನ್ನಾದರೂ ಇಲ್ಲಿನ ಜನರ ಸಂಕಷ್ಟ ಪರಿಹಾರಕ್ಕೆ ಸ್ಪಂದಿಸಬೇಕು. ಸರ್ಕಾರ ಕೂಡಲೇ ಪರಿಹಾರ ವಿತರಿಸಬೇಕು. ಇಲ್ಲವಾದರೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

‘ವಿದ್ಯಾಗಮ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ಸ್ಥಗಿತಗೊಳಿಸಬೇಕು. ಕೋವಿಡ್-19ನಿಂದ ಮಕ್ಕಳು ಅಥವಾ ಶಿಕ್ಷಕರು ಮೃತಪಟ್ಟರೆ ಕುಟುಂಬದವರಿಗೆ ₹ 1 ಕೋಟಿ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ ಪ್ರದರ್ಶನ

Spread the love ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ