Breaking News

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ.

Spread the love

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ.

ನಗರದಲ್ಲಿ ಗುರುವಾರ ರಾತ್ರಿಯಿಂದ ಜಿಟಿಜಿಟಿ ಮಳೆ ಬಿದ್ದಿತು. ಬೆಳಿಗ್ಗೆಯಿಂದಲೂ ಆಗಾಗ ಸಾಧಾರಣ ಮಳೆಯಾಗುತ್ತಿದೆ.

ಚಿಕ್ಕೋಡಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿಯಿಂದ ಮಳೆ ಪ್ರಮಾಣ ಗಣನೀಯವಾಗಿ ಕ್ಷೀಣಿಸಿದೆ. ಆದರೆ, ಮಹಾರಾಷ್ಟ್ರದಿಂದ ಕೃಷ್ಣಾ ಮತ್ತು ಉಪ ನದಿಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಮಾತ್ರ ನಿರಂತರ ಏರಿಕೆ ದಾಖಲಾಗುತ್ತಿದೆ.

ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 1.04 ಲಕ್ಷ ಮತ್ತು ದೂಧ್‌ಗಂಗಾ ನದಿಯಿಂದ 15,135 ಕ್ಯುಸೆಕ್ ಸೇರಿದಂತೆ ಆ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1.15 ಲಕ್ಷ ಕ್ಯುಸೆಕ್ ನೀರು ಸೇರುತ್ತಿದೆ. ಇದರಿಂದಾಗಿ ನದಿ ತೀರದ ಗ್ರಾಮಗಳಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.

ನಿಪ್ಪಾಣಿ ತಾಲ್ಲೂಕಿನ ‌ಕಾರದಗಾ ಮತ್ತು ಭೋಜ ಗ್ರಾಮಗಳ ಮಧ್ಯೆ ದೂಧ್‌ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಕಂ ಬ್ಯಾರೇಜ್ ಗುರುವಾರ ರಾತ್ರಿ ಮುಳುಗಿದೆ. ಪರ್ಯಾಯ ಮಾರ್ಗ ಇರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿಲ್ಲ.

ಕೆಲವು ಯುವಕರು, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ‌ ಕೃಷ್ಣಾ ನದಿ ನೀರಿನಿಂದ ಜಲಾವೃತವಾಗಿರುವ ವಿದ್ಯುತ್‌ ಟವರ್ ಮೇಲಿನಿಂದ ಜಿಗಿದು ಈಜಾಡುವ ಮೂಲಕ ದುಸ್ಸಾಹಸ ಪ್ರದರ್ಶಿಸುತ್ತಿದ್ದು ಕಂಡುಬಂತು.


Spread the love

About Laxminews 24x7

Check Also

ರೈತರು ಉತ್ಪಾದಿಸುವ ಆಹಾರ ಧಾನ್ಯಗಳ ಖರೀದಿ ಜವಾಬ್ದಾರಿ ಎಫ್​​​ಸಿಐಗೆ ವಹಿಸಿ: ಈರಣ್ಣ ಕಡಾಡಿ

Spread the loveಬೆಂಗಳೂರು: ರೈತರು ಉತ್ಪಾದಿಸುವ ಆಹಾರ ಧಾನ್ಯಗಳನ್ನು ಖರೀದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಇದರ ಜವಾಬ್ದಾರಿಯನ್ನು ಭಾರತೀಯ ಆಹಾರ ನಿಗಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ