ಬೆಂಗಳೂರು, ಅ.17-ದೇಶಾದ್ಯಂತ ನವರಾತ್ರಿ ಸಡಗರ ಸಂಭ್ರಮ ಇಂದಿನಿಂದ ಆರಂಭವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ, ಮಹಮೋಹನ್ ಸಿಂಗ್, ಕೇಂದ್ರ ಸಚಿವರಾದ ಅಮಿತ್ ಷಾ, ಡಿ.ವಿ.ಸದಾನಂದಗೌಡ, ಕಾಂಗ್ರೆಸ್ ನಾಯಕರಾದ ರಾಹುಲ್‍ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿಂದಂತೆ ವಿವಿಧ ಪಕ್ಷಗಳ ಧುರೀಣರು ದೇಶದ ಜನತೆಗೆ ಶುಭ ಕೋರಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಎಸ್.ಎಂ.ಕೃಷ್ಣ, ರಾಜ್ಯದ ಸಚಿವರು, ಸಂಸದರು ಶಾಸಕರು ಸೇರಿದಂತೆ ಹಲವು ಗಣ್ಯರು ನವರಾತ್ರಿ ಉತ್ಸವದ ಶುಭಾಶಯವನ್ನು ನಾಡಿನ ಜನತೆಗೆ ಕೋರಿದ್ದಾರೆ.
ಇಂದಿನಿಂದ ನವರಾತ್ರಿ ಉತ್ಸವ ಆರಂಭವಾಗಿದೆ. ಮೊದಲ ದಿನ ಶೈಲ ಪುತ್ರಿಯನ್ನು ಆರಾಧಿಸಲಾಗುತ್ತದೆ. ಈ ಮಹಾ ಮಾತೆ ವಿಶ್ವದಲ್ಲಿ ಆರೋಗ್ಯ,ಸುಖ-ಶಾಂತಿ , ನೆಮ್ಮದಿ ನೀಡಲಿ ಎಂದು ಗಣ್ಯರು ಹಾರೈಸಿದ್ದಾರೆ.