Breaking News

ನಾಡದೇವತೆಗೆ ಪುಷ್ಪಾರ್ಚನೆ ಮಾಡಿ ಪ್ರವಾಹ ಸಂತ್ರಸ್ತರಿಗೆ ಅಭಯ ನೀಡಿದ ಸಿಎಂ ಬಿಎಸ್‍ವೈ

Spread the love

ಬೆಂಗಳೂರು,ಅ.17-ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಉತ್ತರ ಕರ್ನಾಟಕದ ಸಂತ್ರಸ್ತರ ರಕ್ಷಣೆ ಹಾಗೂ ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರ ಬದ್ದವಾಗಿದ್ದು, ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಯ ನೀಡಿದ್ದಾರೆ. ನಿನ್ನೆಯಷ್ಟೇ ಪ್ರಧಾನಿ ನರೇಂದ್ರಮೋದಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ರಾಜ್ಯದ ನೆರೆ ಪರಿಸ್ಥಿತಿ ಕುರಿತಂತೆ ಸಂಪೂರ್ಣ ಮಾಹಿತಿ ನೀಡಿದ್ದೇನೆ.

ಕರ್ನಾಟಕ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರ ಬದ್ದವಿದೆ ಎಂದು ಹೇಳಿದ್ದಾರೆ. ಹೀಗಾಗಿ ಯಾರೊಬ್ಬರೂ ಚಿಂತೆಗೀಡಾಗಬಾರದು ಎಂದು ಮನವಿ ಮಾಡಿದರು. ವಿಶ್ವ ವಿಖ್ಯಾತ ನಾಡಹಬ್ಬ ದಸರಾಕ್ಕೆ ಸಾಂಸ್ಕøತಿಕ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಗ್ಗೆ 7.55ಕ್ಕೆ ಸಲ್ಲುವ ಬ್ರಾಹ್ಮಿ ಶುಭ ಲಗ್ನದಲ್ಲಿ ನಾಡದೇವತೆಯ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ 9 ದಿನಗಳ ನವರಾತ್ರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಉತ್ತರ ಕರ್ನಾಟಕದಲ್ಲಿ ನೆರೆ ಪರಿಸ್ಥಿತಿ ಉಂಟಾಗಿರುವುದು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆ. ಕರ್ನಾಟಕಕ್ಕೆ ಬೇಕಾದ ನೆರವು ನೀಡಲು ಸಿದ್ದ ಎಂದು ಮೋದಿಯವರೇ ಹೇಳಿದ್ದಾರೆ. ದಸರಾ ಹಬ್ಬದಂತಹ ಸಂದರ್ಭದಲ್ಲಿ ಪ್ರಧಾನಿಯವರಿಂದಲೇ ಈ ಆಶ್ವಾಸನೆ ಸಿಕ್ಕಿರುವುದರಿಂದ ನಮಗೆ ತುಸು ನೆಮ್ಮದಿ ತಂದಿದೆ ಎಂದು ಸಂತಸ ವ್ಯಕ್ತಪಡಿಸಿದರು. ಪ್ರವಾಹಪೀಡಿತ ಸ್ಥಳಗಳಿಗೆ ನಿನ್ನೆಯಷ್ಟೇ ಕಂದಾಯ ಸಚಿವ ಅಶೋಕ್ ಭೇಟಿಕೊಟ್ಟು ಸಂತ್ರಸ್ತರ ಸಂಕಷ್ಟಗಳನ್ನು ಆಲಿಸಿದ್ದಾರೆ. ಸದ್ಯದ ಪ್ರಾಥಮಿಕ ಅಂದಾಜಿನ ಪ್ರಕಾರ ಪ್ರವಾಹದಿಂದಾಗಿ ರಾಜ್ಯದಲ್ಲಿ ಒಟ್ಟು 9952 ಕೋಟಿ ರೂ.ನಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಸರ್ಕಾರ ಎಲ್ಲ ರೀತಿಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸಿದ್ದವಿದೆ. ಕರ್ನಾಟಕವನ್ನು ಆರ್ಥಿಕವಾಗಿ ಸದೃಢಗೊಳಿಸಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು. ರಾಜ್ಯ ಅತ್ಯಂತ ಸಂಕಷ್ಟದ ಸ್ಥಿತಿಯಲ್ಲಿರುವಾಗಲೇ ಈ ನಾಡ ಹಬ್ಬ ದಸರಾವನ್ನು ಆಚರಿಸುತ್ತಿದ್ದೇವೆ. ನಾಡದೇವತೆ ಚಾಮುಂಡಿಯ ಸನ್ನಿಧಿಯಲ್ಲಿ ನಾವೆಲ್ಲರೂ ಕೊರೊನಾ ನಿವಾರಣೆಗಾಗಿ ಪ್ರಾರ್ಥಿಸೋಣ ಎಂದು ಜನತೆಗೆ ಮನವಿ ಮಾಡಿದರು.

 


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ