Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಅಲಮಟ್ಟಿ ಎತ್ತರ ಹೆಚ್ಚಿಸಲು ನಾಳೆ ಜಲಸಂಪನ್ಮೂಲ ಸಚಿವರ ದೆಹಲಿ ಚಲೋ….!!!

ಅಲಮಟ್ಟಿ ಎತ್ತರ ಹೆಚ್ಚಿಸಲು ನಾಳೆ ಜಲಸಂಪನ್ಮೂಲ ಸಚಿವರ ದೆಹಲಿ ಚಲೋ….!!!

Spread the love

ಬೆಳಗಾವಿ- ಕಳಸಾ ಬಂಡೂರಿ ನಾಲಾ ಯೋಜನೆಯ ಕಾನೂನು ತೊಡಕುಕುಗಳು ನಿವಾರಣೆಯಾದ ಬಳಿಕ ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಈಗ ಅಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದಾರೆ

 

ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟವನ್ನು ಏರಿಸುವ ವಿಷಯಕ್ಕೆ ಸಂಬಂಧಿಸಿದಂತೆ ನಾಳೆ ದಿ. 17.03.2020 ಮಂಗಳವಾರ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ ರಮೇಶ್ ಜಾರಕಿಹೊಳಿಯವರು ಕೇಂದ್ರದ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, ಕೂಡಲೇ ರಾಜ್ಯದ ಈ‌ ಪ್ರಸ್ತಾಪಕ್ಕೆ ಅನುಮೋದನೆ ನೀಡುವಂತೆ ಮನವಿ ಮಾಡಲಿದ್ದಾರೆ.

ನಾಳೆ ಬೆಳಗ್ಗೆ 10 ಗಂಟೆಗೆ
ಕೇಂದ್ರ ಜಲಶಕ್ತಿ ಸಚಿವರ ಕಚೇರಿ, ನವದೆಹಲಿಯಲ್ಲಿ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಸಂಪನ್ಮೂಲ ಸಚಿವರ ಜೊತೆ ಸಮಾಲೋಚನೆ ನಡೆಸಲಿದ್ದು ಇದೇ ಸಂಧರ್ಭದಲ್ಲಿ ಕಳಸಾ ಬಂಡೂರಿ ನಾಲಾ ಯೋಜನೆಯ ಅನುಷ್ಠಾನದ ಕುರಿತು ಚರ್ಚೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ