Breaking News
Home / Uncategorized / ಹೇಮಂತ್ ನಿಂಬಾಳ್ಕರ್, ಅಜಯ ಹಿಲೋರಿ ಸೇರಿದಂತೆ ಹಲವರ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.

ಹೇಮಂತ್ ನಿಂಬಾಳ್ಕರ್, ಅಜಯ ಹಿಲೋರಿ ಸೇರಿದಂತೆ ಹಲವರ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.

Spread the love

ಬೆಂಗಳೂರು: ಸುಮಾರು ₹ 4,000 ಕೋಟಿ ರೂಪಾಯಿ ಮೌಲ್ಯದ ಐಎಂಎ ವಂಚನೆ ಹಗರಣದಲ್ಲಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ ಹಿಲೋರಿ ಸೇರಿದಂತೆ ಹಲವರ ವಿರುದ್ಧ ಸಿವಿಐ ತನಿಖಾ ತಂಡ ಶನಿವಾರ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.

ಐಎಂಎ ಮಾಲೀಕ ಮೊಹಮ್ಮದ್ ಮನ್ಸೂರ್‌ ಖಾನ್‌, ಕೆಎಎಸ್‌ ಅಧಿಕಾರಿ ಎಲ್‌.ಸಿ. ನಾಗರಾಜ್‌ ಸೇರಿದಂತೆ ಕೆಲವರ ವಿರುದ್ಧ ಸಿಬಿಐ ಈ ಹಿಂದೆಯೇ ಆರೋಪಪಟ್ಟಿ ಸಲ್ಲಿಸಿತ್ತು.

ಹೇಮಂತ್‌ ನಿಂಬಾಳ್ಕರ್‌, ಅಜಯ್‌ ಹಿಲೋರಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ರಾಜ್ಯ ಸರ್ಕಾರ ಸೆಪ್ಟೆಂಬರ್‌ನಲ್ಲಿ ಸಿಬಿಐಗೆ ಅನುಮತಿ ನೀಡಿತ್ತು. ಶನಿವಾರ ನ್ಯಾಯಾಲಯಕ್ಕೆ ಹೆಚ್ಚುವರಿ ಆರೋಪಪಟ್ಟಿಯನ್ನು ಸಲ್ಲಿಸಿರುವ ಸಿಬಿಐ ಅಧಿಕಾರಿಗಳು, ಐಪಿಎಸ್‌ ಅಧಿಕಾರಿಗಳು ಸೇರಿದಂತೆ 28 ಜನರ ವಿರುದ್ಧ ದೋಷಾರೋಪ ಹೊರಿಸಿದ್ದಾರೆ.

‘ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಮತ್ತು ಪೊಲೀಸ್‌ ಅಧಿಕಾರಿಗಳು ಐಎಂಎ ಕಂಪನಿಯ ವಿರುದ್ಧ ‘ಕರ್ನಾಟಕ ಹೂಡಿಕೆದಾರರ ಹಿತಾಸಕ್ತಿ ಸಂರಕ್ಷಣಾ (ಕೆಪಿಐಡಿ) ಕಾಯ್ದೆ’ ಅಡಿಯಲ್ಲಿ ವಿಚಾರಣೆ ನಡೆಸಿದ್ದರು. ಕಂಪನಿ ಹೂಡಿಕೆದಾರರಿಗೆ ವಂಚನೆ ಮಾಡುತ್ತಿರುವುದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಲಭಿಸಿದ್ದರೂ, ಸತ್ಯಾಂಶ ಮುಚ್ಚಿಟ್ಟು ಪ್ರಕರಣವನ್ನು ಮುಕ್ತಾಯಗೊಳಿಸಿದ್ದರು’ ಎಂದು ಸಿಬಿಐ ಆರೋಪಪಟ್ಟಿಯಲ್ಲಿ ಹೇಳಿದೆ.


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ