Breaking News

ಮಸಾಜ್ ಹೆಸರಲ್ಲಿ ಸೆಕ್ಸ್ ದಂಧೆ

Spread the love

ಜೈಪುರ: ಸ್ಪಾ, ಮಸಾಜ್ ಹೆಸರಲ್ಲಿ ಸೆಕ್ಸ್ ದಂಧೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, 12 ಜನರನ್ನ ಬಂಧಿಸಿದ್ದಾರೆ. ರಾಜಸ್ಥಾನದ ಅಲ್ವಾರ ಜಿಲ್ಲೆಯ ಬಿವಢಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದಾಳಿ ವೇಳೆ ಬಂಧಿಸಿರುವ 9 ಯುವತಿಯರು ಸೇರಿದಂತೆ 12 ಜನರನ್ನ ಫೂಲ್‍ಬಾಗ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ನಡೆಸಲಾಗುತ್ತಿದೆ. 12 ಜನರಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದು, ಯಾರ ಜೊತೆ ಸಂಪರ್ಕದಲ್ಲಿದ್ದರು ಎಂಬುದರ ಕುರಿತು ತನಿಖೆ ನಡೆಸಲಾಗ್ತಿದೆ. ದೆಹಲಿ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಿಂದ ಯುವತಿಯರನ್ನ ದಂಧೆಗೆ ಕರೆಸಿಕೊಳ್ಳಲಾಗುತ್ತಿತ್ತು. ಸ್ಪಾ ಹೆಸರಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮೌಖಿಕ ದೂರುಗಳು ಬಂದಿದ್ದವು. ಈ ಹಿನ್ನೆಲೆ ಪೊಲೀಸರೊಬ್ಬರು ಗ್ರಾಹಕರಾಗಿ ಹೋದಾಗ ಒಳಗಿನ ರಹಸ್ಯ ಬಯಲಾಗಿದೆ. ಖಚಿತ ಮಾಹಿತಿ ಲಭ್ಯವಾಗುತ್ತಿದ್ದಂತೆ ಶನಿವಾರ ದಾಳಿ ನಡೆಸಿ 12 ಜನರನ್ನ ಬಂಧಿಸಲಾಗಿದೆ

 


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ