ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಅತಿವೃಷ್ಟಿ/ ಪ್ರವಾಹ ಸ್ಥಿತಿಗತಿ, ಕೈಗೊಂಡ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಬೆಳಗಾವಿ ಉತ್ತರ ಕ್ಷೇತ್ರದ ಹಲವೆಡೆ ಮನೆ ಕಳೆದುಕೊಂಡ ಹಲವರ ಹೆಸರು ಪಟ್ಟಿಯಲ್ಲಿ ಇಲ್ಲ. ಹಾಗೂ ನನ್ನ ಮತಕ್ಷೇತ್ರದಲ್ಲಿ ಕಳೆದ ಮಳೆಗಾಲದಲ್ಲಿ ಬಿದ್ದ ಮನೆಗಳನ್ನು ಕಟ್ಟಲು 2ನೇ ಅನುದಾನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಸಂಭಂದಿಸಿದ ಅಧಿಕಾರಿಗಳು ಇದನ್ನು ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆನು.
ಸರ್ಕಾರ ಪ್ರವಾಹ ಸಂತ್ರಸ್ತರ ಜೊತೆಗೆ ಯಾವಾಗಲೂ ಇದೆ. ಸಂತ್ರಸ್ತರಿಗೆ ಊಟ, ವಸತಿ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಳೆದ ಸಾರಿ ಬೆಳೆ ಹಾನಿ ಅನುಭವಿಸಿದ ರೈತರಿಗೆ ಈಗಾಗಲೇ ಪರಿಹಾರಧನ ಬಿಡುಗಡೆ ಮಾಡಲಾಗಿದೆ. ಪ್ರವಾಹ ಸಂತ್ರಸ್ತರಿಗೂ ಅಗತ್ಯ ಪರಿಹಾರ ಬಿಡುಗಡೆ ಮಾಡಲಾಗಿದೆ. ಲೋಪದೋಷಗಳಿದ್ದರೆ ಅವನ್ನು ಸರಿಪಡಿಸಿಕೊಳ್ಳಲು ಅಧಿಕಾರಿಗಳಿಗೆ ಕಂದಾಯ ಸಚಿವ ಶ್ರೀ ಆರ್ ಅಶೋಕ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ರಮೇಶ ಜಾರಕಿಹೊಳಿ, ಶಾಸಕರಾದ ಶ್ರೀ ಅಭಯ ಪಾಟೀಲ, ವಿಧಾನ ಸಭೆ ಉಪ ಸಭಾಧ್ಯಕ್ಷರಾದ ಶ್ರೀ ಆನಂದ ಮಾಮನಿ, ಬುಡಾ ಅಧ್ಯಕ್ಷರಾದ ಶ್ರೀ ಗೂಳೆಪ್ಪ ಹೊಸಮನಿ, ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷರಾದ ಶ್ರೀ ಮುಕ್ತಾರ್ ಪಠಾಣ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
