Breaking News

ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಮೈಸೂರು: ಇಬ್ಬರು ಬಾಲಕರು ಸೇರಿ ಮೂವರು ದ್ವಿಚಕ್ರ ವಾಹನ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 12 ಲಕ್ಷ ಮೌಲ್ಯದ 17 ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಸ್ಕೂಟರ್ ಮೆಕ್ಯಾನಿಕ್ ಮಹಮದ್ ಶುಹೇಬ್ (19) ಬಂಧಿತ ಆರೋಪಿ. ಹಾಗೂ ಕಳ್ಳತನಕ್ಕೆ ಸಾಥ್ ನೀಡಿದ್ದ 17 ವರ್ಷದ ಬಾಲಕ ಹಾಗೂ 15 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಕಳುವು ಮಾಡಿದ ದ್ವಿಚಕ್ರ ವಾಹನಗಳಲ್ಲಿ ವೀಲಿಂಗ್ ಮಾಡುತ್ತಿದ್ದರು. ಅದರಲ್ಲೂ ಸಿಲ್ವರ್ ಕಲರ್ ದ್ವಿಚಕ್ರ ವಾಹನಗಳೇ ಹೆಚ್ಚು ಟಾರ್ಗೆಟ್ ಮಾಡುತ್ತಿದ್ದರು. ಕದ್ದ ಬೈಕ್​ ನಂಬರ್ ಪ್ಲೇಟ್ ಬದಲಿಸಿ ವೀಲಿಂಗ್ ಮಾಡಲು ಬಳಸುತ್ತಿದ್ದರು. ಉದಯಗಿರಿ, ಎನ್ ಆರ್.ಮೊಹಲ್ಲಾ, ವಿಜಯನಗರ, ಮಹದೇವಪುರ, ಶ್ರೀರಂಗಪಟ್ಟಣ ಹಾಗೂ ಮಂಡ್ಯದಲ್ಲಿ ವಾಹನಗಳನ್ನ ಕಳುವು ಮಾಡಿದ್ದಾರೆ. ಸದ್ಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮೊಹಮದ್ ಶುಹೇಬ್ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

 


Spread the love

About Laxminews 24x7

Check Also

ಬುಧವಾರವೂ ಜಿಲ್ಲೆಯಎಲ್ಲ ತಾಲ್ಲೂಕುಗಳ ಶಾಲೆಗಳಿಗೆರಜೆ ಘೋಷಣೆ: ಜಿಲ್ಲಾಧಿಕಾರಿ

Spread the love ಬುಧವಾರವೂ ಜಿಲ್ಲೆಯಎಲ್ಲ ತಾಲ್ಲೂಕುಗಳ ಶಾಲೆಗಳಿಗೆರಜೆ ಘೋಷಣೆ ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿಮಳೆ ಸುರಿಯುತ್ತಿದ್ದು ಜಿಲ್ಲೆಯ ಜನಜೀವನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ