Breaking News

ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದ್ದರಿಂದ ತೆನೆಗಳಿರುವ, ಕೊಯ್ಯಲು ಬಂದಿದ್ದ ಮೆಕ್ಕೆಜೋಳದ ಫಸಲನ್ನು ರೈತ ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ.

Spread the love

ಹಾವೇರಿ: ಮೆಕ್ಕೆಜೋಳದ ಬೆಲೆ ಕುಸಿತ ಕಂಡಿದ್ದರಿಂದ ತೆನೆಗಳಿರುವ, ಕೊಯ್ಯಲು ಬಂದಿದ್ದ ಮೆಕ್ಕೆಜೋಳದ ಫಸಲನ್ನು ರೈತ ಟ್ರ್ಯಾಕ್ಟರ್ ಮೂಲಕ ನಾಶಪಡಿಸಿದ್ದಾರೆ.

ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ರೈತ ಮಾದೇವಪ್ಪ ಒಡೇನಪುರ ಅವರು ಒಂದು ಎಕರೆ ಇಪ್ಪತ್ತು ಗುಂಟೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ನಾಶಪಡಿಸಿದ್ದಾರೆ.

ಮೆಕ್ಕೆಜೋಳದ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿದಿದ್ದರಿಂದ ರೈತ ಈ ರೀತಿ ಮಾಡಿದ್ದಾರೆ. ಒಂದು ಕ್ವಿಂಟಾಲ್ ಮೆಕ್ಕೆಜೋಳದ ಬೆಲೆ ಕೇವಲ ಒಂದು ಸಾವಿರ ರೂಪಾಯಿಗೆ ಕುಸಿದಿದ್ದರಿಂದ ಬೇಸತ್ತು ಬೆಳೆ ನಾಶ ಮಾಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಪ್ರತಿ ಕ್ವಿಂಟಾಲಿಗೆ ಎರಡು ಸಾವಿರ ರೂಪಾಯಿವರೆಗೆ ಮೆಕ್ಕೆಜೋಳ ಮಾರಾಟವಾಗಿತ್ತು. ಇದೀಗ ಬೆಲೆ ಒಂದು ಸಾವಿರ ರೂ.ಗೆ ಕುಸಿದಿದ್ದರಿಂದ ರೈತ ಬೆಳೆ ನಾಶ ಮಾಡಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ