Breaking News

B.S.Y.ಇವರು ಶಿವಮೊಗ್ಗ ಮುಖ್ಯಮಂತ್ರಿಯೋ ? ಕರ್ನಾಟಕದ ಮುಖ್ಯಮಂತ್ರಿಯೋ ?: ಉಮೇಶ ಕತ್ತಿ

Spread the love

ಬೆಂಗಳೂರು : ಬಿಜೆಪಿ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ಇದೆ ಎಂಬುವುದು ಪುಃನ ಪುನಹ ಸಾಭಿತಾಗುತ್ತಿದೆ. ಬಿಜೆಪಿ ಶಾಸಕರೇ ಸಿಎಂ ಬಿ.ಎಸ್.ಯಡಿಯೂರಪ್ಪನ ವಿರುದ್ಧ ಅಸಮಾಧಾನ ಹೊರ  ಹಾಕುತ್ತಿದ್ದಾರೆ.

ವಿಜಯಪುರದಲ್ಲಿ  ಬಿಜೆಪಿ ಶಾಸಕ ಬಸವರಾಜ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ಸಿಎಂ ಬಿಎಸ್.ಯಡಿಯೂರಪ್ಪ ಕೇಂದ್ರಕ್ಕೂ ಸಾಕಾಗಿದ್ದಾರೆ. ಇನ್ನು ಬಹಳ ದಿನ ಅಧಿಕಾರದಲ್ಲಿ ಇರುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಜತೆಗೆ ಕ್ಷೇತ್ರಕ್ಕೆ ನೀಡಿದ ಅನುದಾನ ವಾಪಾಸ ಪಡೆದಿರುವುದಕ್ಕೆ ಆಕ್ರೋಶ ವ್ಯಕ್ತ ಪಡಿಸಿದ ಅವರು, ಅನುದಾನ ಮರಳಿ ಪಡೆಯುವುದು ನನಗೆ ಗೊತ್ತಿದೆ ಎಂದು ಸವಾಲ್ ಹಾಕಿದ್ದಾರೆ.ಮಾತಿನ ರಬಸದಲ್ಲಿ ಉಮೇಶ ಕತ್ತಿ ಸಿಎಂ ಬಗ್ಗೆ ಅಸಮಾಧಾನದ ಮಾತುಗಳನ್ನು ಆಡಿದ್ದರು ಎಂದು ತಿಳಿಸಿದ್ದಾರೆ.

ಮೊನ್ನೆ ಉಮೇಶ ಕತ್ತಿ ಅವರು, ಸಿಎಂ ಅನುದಾನವನ್ನು ಬರೀ ಶಿವಮೊಗ್ಗಕ್ಕೆ ಒಯ್ಯುತ್ತಿದ್ದಾರೆ.  ಇವರು ಶಿವಮೊಗ್ಗ ಮುಖ್ಯಮಂತ್ರಿಯೋ ? ಕರ್ನಾಟಕದ ಮುಖ್ಯಮಂತ್ರಿಯೋ ? ಎಂದು ತಿಳಿಯುತ್ತಿಲ್ಲವೆಂದು ಹೇಳಿಕೆ ನೀಡಿದ್ರು  ಎಂದು ಹೇಳಿದ್ದಾರೆ.

ವಿಚಾರ ಆಡಳಿತ ಹಾಗೂ ಪ್ರತಿಪಕ್ಷ ನಾಯಕರ ನಡುವಣ ವಾಕ್ಸಮರಕ್ಕೆ ಕಾರಣವಾಗಿರುವಂತೆ ಪಕ್ಷದಲ್ಲಿ ಅಸಮಾಧಾನ ಇರುವುದು ನಿಜವಾಗಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ