Home / ಅಂತರಾಷ್ಟ್ರೀಯ / ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ.

ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ.

Spread the love

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯ ಖಂಗಾಂ ಎಂಬ ಪುಟ್ಟ ಹಳ್ಳಿಯಿಂದ ವೃದ್ಧೆಯೊಬ್ಬರು ಬರೋಬ್ಬರಿ 2,200 ಕಿ.ಮೀ ದೂರವಿರುವ ಮಾತಾ ವೈಷ್ಣೋದೇವಿಯ ದೇವಸ್ಥಾನಕ್ಕೆ ತೆರಳಲು ಮುಂದಾಗಿದ್ದಾರೆ. ಅದು ಬಸಲ್ಲಿ ಅಥವಾ ಕಾರಿನಲ್ಲಿ ಅಲ್ಲ; ಬದಲಿಗೆ ಸೈಕಲ್​ನಲ್ಲಿ.

ಹೌದು, ರೇಖಾ ದೇವ್ಭಂಕರ್​ ಎಂಬುವ 68 ವರ್ಷದ ವೃದ್ಧೆ ಮಹಾರಾಷ್ಟ್ರದ ತಮ್ಮ ಹಳ್ಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವೈಷ್ಣೋದೇವಿಯ ಸನ್ನಿಧಾನಕ್ಕೆ ಹೋಗಿ ದೇವಿಯ ದರ್ಶನ ಪಡೆಯಲು ಮುಂದಾಗಿದ್ದಾರೆ. ಪ್ರಯಾಣದ ವೇಳೆ ತಮಗೆ ಬೇಕಾಗುವ ಅಗತ್ಯ ವಸ್ತುಗಳನ್ನ ಸೈಕಲ್​ನ ಕ್ಯಾರಿಯರ್​ ಮೇಲೇ ಕಟ್ಟಿಕೊಂಡು ತಮ್ಮ ತೀರ್ಥಯಾತ್ರೆ ಕಂ ಸೈಕಲ್​ ಟ್ರಿಪ್​ ಶುರುಮಾಡಿದ್ದಾರೆ.

ರೇಖಾರವರು ಇದೇ ಜುಲೈ 24 ರಂದು ತಮ್ಮ ಮನೆಯಿಂದ ಹೊರಟು ಸದ್ಯ ಮಧ್ಯಪ್ರದೇಶ ತಲುಪಿದ್ದಾರೆ.

ಈ ನಡುವೆ, ಕೆಲವರೊಟ್ಟಿಗೆ ಮಾತನಾಡಿದ ವೃದ್ಧೆ ಪ್ರತಿಯೊಬ್ಬ ಮಹಿಳೆ ಧೈರ್ಯದಿಂದ ಬದುಕು ಸಾಗಿಸಬೇಕು ಮತ್ತು ಈ ನಿಟ್ಟಿನಲ್ಲಿ ಆತ್ಮವಿಶ್ವಾಸ ಬೆಳಸಿಕೊಳ್ಳಬೇಕು ಎಂದು ಹೇಳಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ