Breaking News

ಉತ್ತರ ಕರ್ನಾಟಕ ನೆರೆ ಪ್ರದೇಶದಲ್ಲಿ ಸಿಎಂ ಬಿಎಸ್ ವೈ ವೈಮಾನಿಕ ಸಮೀಕ್ಷೆ

Spread the love

ಕಲಬುರಗಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ನೆರೆ, ಪ್ರವಾಹ ಪೀಡಿತ ಪ್ರದೇಶಗಳಾದಂತ ಕಲಬುರ್ಗಿ, ವಿಜಯಪುರ, ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ. ಹಾನಿಯ ಬಗ್ಗೆ ಮಾಹಿತಿ ಪಡೆದು, ಹೆಚ್ಚಿನ ನೆರವಿಗಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿರುವುದಾಗಿ ತಿಳಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ , ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ