ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ದೇವಸ್ಥಾನದಲ್ಲಿ ಇಂದು ಮೊಸಳೆಯೊಂದು ಪ್ರತ್ಯಕ್ಷವಾಗಿದೆ.
ಗರ್ಭಗುಡಿ ಬಳಿ ಬಂದಿದ್ದು, ಈ ಕ್ಷೇತ್ರದ ಮೊಸಳೆ ಅನ್ನೋದು ವಿಶೇಷ. ಈ ಕ್ಷೇತ್ರ ಕೆರೆ ನೀರಿನ ಮಧ್ಯೆ ಇದ್ದು ಇಲ್ಲಿನ ಕೆರೆಯಲ್ಲಿ ವಾಸವಾಗಿರುವ ದೇವರ ಮೊಸಳೆ ಎಂದೇ ಪ್ರಸಿದ್ಧಿ ಪಡೆದ ‘ಬಬಿಯಾ’ ಅನ್ನುವ ಮೊಸಳೆ ಗರ್ಭಗುಡಿ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.
ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುವ ‘ಬಬಿಯಾ’ಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಆದರೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.