Breaking News

ಕಾರಣ ಕೊಡದೇ ಯತ್ನಾಳರನ್ನ ಪಕ್ಷದಿಂದ ಉಚ್ಛಾಟಿಸಬೇಕು: ಕೆ.ಎಸ್.ಈಶ್ವರಪ್ಪ

Spread the love

ಕೊಪ್ಪಳ: ಶಾಸನ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕಾರಣ ನೀಡದೇ ಪಕ್ಷದಿಂದ ಉಚ್ಛಾಟಿಸಬೇಕೆಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಕೆಲವರು ಬಾಯಿ ಚಪಲಕ್ಕೆ ಮೂರ್ಖತನದ ಹೇಳಿಕೆ ನೀಡುತ್ತಿರುತ್ತಾರೆ. ಇತ್ತೀಚೆಗೆ ನಡೆದ ಶಾಸಕಾಂಗ ಸಭೆಯಲ್ಲಿ ಎಲ್ಲ ಶಾಸಕರು ಭಾಗಿಯಾಗಿದ್ದರು. ಈ ವೇಳೆ ಮುಖ್ಯಮಂತ್ರಿಗಳು ಎಲ್ಲರಿಗೂ ನಿಮ್ಮ ಕ್ಷೇತ್ರದ ಸಮಸ್ಯೆ ಏನು ಅಂತ ಕೇಳಿ, ಬಗೆಹರಿಸಿಕೊಳ್ಳುವಂತೆ ಹೇಳಿದ್ದರು. ಆ ಸಭೆಯಲ್ಲಿ ಸುಮ್ಮನೆ ಬಾಯಿ ಮಚ್ಚಿ ಕುಳಿತುಕೊಂಡು, ಉತ್ತರನ ಪೌರುಷದಂತೆ ಹೊರಗೆ ಬಂದು ಹೇಳಿಕೆ ನೀಡುತ್ತಾರೆ ಎಂದು ಯತ್ನಾಳ್‍ಗೆ ಟಾಂಗ್ ನೀಡಿದರು.ಯತ್ನಾಳ್ ಹೇಳಿಕೆಯಿಂದ ಕಾಂಗ್ರೆಸ್ ನಾಯಕರಿಗೆ ಸಂತೋಷ ಆಗಿರಬಹುದು. ಸಿದ್ದರಾಮಯ್ಯನವರು ಬಿಜೆಪಿ ಸರ್ಕಾರ ಪತನವಾದ್ರೆ ನಾನು ಕಾರಣ ಅಲ್ಲ ಅಂತ ಹೇಳುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯನವರೇ ಅಂತಾ ಕುಮಾರಸ್ವಾಮಿ ಹೇಳಿದ್ದಾರೆ. ಸ್ವರ್ಗದಲ್ಲಿರುವ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಬಂದರೂ ಬಿಜೆಪಿ ಸರ್ಕಾರ ಬೀಳಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರ ಹೇಳಿಕೆ ತಿರುಗೇಟು ನೀಡಿದರು.

ಒಬ್ಬ ಯತ್ನಾಳ್ ಹೇಳಿಕೆಯಿಂದ ಯಾವ ಪರಿಣಾಮವೂ ಪಕ್ಷದ ಮೇಲೆ ಬೀರಲ್ಲ. ಪದೇ ಪದೇ ಈ ರೀತಿಯ ಯತ್ನಾಳ್ ಹೇಳಿಕೆಗಳಿಗೆ ಬೆಲೆ ನೀಡಲ್ಲ. ಈ ಕೂಡಲೇ ಯತ್ನಾಳ್ ಅವರನ್ನ ಪಕ್ಷದಿಂದ ಉಚ್ಚಾಟಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬಳಿ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ