ಗದಗ: ಡೆಡ್ಲಿ ಕೊರೊನಾ ವೈರಸ್ ಎಲ್ಲಡೆ ರಣಕೇಕೆ ಹಾಕುತ್ತಿರುವ ಸಂದರ್ಭದಲ್ಲಿ ಜನ ಭಯಭೀತರಾಗಿದ್ದಾರೆ. ಅದರಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾದ ಹಿನ್ನೆಲೆ ಪರೀಕ್ಷಾರ್ಥಿಗಳಿಗೆ ಗದಗನಲ್ಲಿ ಮಾಸ್ಕ್ ಗಳನ್ನ ವಿತರಣೆ ಮಾಡಲಾಗುತ್ತಿದೆ.
ಕೆಲವು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಒಟ್ಟಾಗಿ ಪರೀಕ್ಷೆ ನಡೆಯುವ ಕಾಲೇಜ್‍ಗಳಿಗೆ ತೆರಳಿ ಮಾಸ್ಕ್ ಹಂಚಿದರು. ಪರೀಕ್ಷಾರ್ಥಿ ವಿದ್ಯಾರ್ಥಿಗಳು ಮಾಸ್ಕ್ ಧರಿಸಿಕೊಂಡು ಪರೀಕ್ಷಾ ಕೊಠಡಿಗಳಿಗೆ ಹೋದರು.
ನಗರದ ಸರ್ಕಾರಿ ಹಾಗೂ ಖಾಸಗಿ ಕಾಲೇಜಿನಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಹಂಚಿಕೆ ಮಾಡಲಾಯಿತು. ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಬಾರದು ಎಂಬ ದೃಷ್ಟಿಯಿಂದ ಸುಮಾರು 500 ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಲಾಗಿದೆ.
ವೈರಸ್‍ನ ಮುಂಜಾಗೃತಾ ಕ್ರಮವಾಗಿ ಅನೇಕ ವಿದ್ಯಾರ್ಥಿಗಳು ಮಾಸ್ಕ್ ಧರಿಸಿಕೊಂಡು ಪರೀಕ್ಷೆ ಬರೆದಿರುವುದು ವಿಶೇಷ. ಪರೀಕ್ಷೆಗಳು ಮುಗಿಯುವರೆಗೆ ಆರೋಗ್ಯ ಇಲಾಖೆ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್‍ಗಳನ್ನು ಹಂಚಬೇಕು ಎಂಬುದು ಸಂಘಟಿಕರ ಒತ್ತಾಯವಾಗಿದೆ.