Breaking News

ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ: ಮುಖ್ಯ ಮಂತ್ರಿ ಯಡ್ಡಿಯೂರಪ್ಪ

Spread the love

ಬೆಂಗಳೂರು : ಉಪ ಚುನಾವಣೆಯಲ್ಲಿ ನಾನೂ ಎಲ್ಲಿಯೂ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ನಾನು ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ. ಆದರೆ ಇದೇ ಅ. 30 ರಂದು ಶಿರಾದಲ್ಲಿ ಒಂದು ಪ್ರಚಾರ ಮಾಡಿ ಬರುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಹಬ್ಬವನ್ನು ಆಚರಿಸುವಂತೆ ಮನವಿ ಮಾಡಿದರು. ಶಿವಮೊಗ್ಗಕ್ಕೆ ತೆರಳುವ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಎಲ್ಲರ ಬಾಳಲ್ಲಿ ಸುಖ ಶಾಂತಿ ನೆಲಿಸಲಿ. ಕೊರೊನಾ ಮಹಾಮಾರಿ ಕಡಿಮೆ ಆಗಲಿ ಎಂದು ಆ ತಾಯಿ ಚಾಮುಂಡೇಶ್ವರಿಯಲ್ಲಿ ಮನವಿ ಮಾಡೋಣ,

ಕೊರೊನಾ ನಿಯಮ ಪಾಲಿಸಿ ದಸರಾ ಹಬ್ಬ ಆಚರಿಸಿ ಎಂದು ಜನತೆಯಲ್ಲಿ ಮನವಿ ಮಾಡಿದರು.ನಿನ್ನೆ ಸಿಎಂ ಯಡಿಯೂರಪ್ಪ ಮಳೆಹಾನಿ ಪರಿಶೀಲನೆ ಬಳಿಕ ಅಧಿಕಾರಿಗಳು ನಾಪತ್ತೆಯಾದರು ಎನ್ನುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಎಲ್ಲ ಅಧಿಕಾರಿಗಳೂ ನಿನ್ನೆ ಇದ್ದರು, ಈಗಾಗಲೇ ನಿನ್ನೆ ಸಂಜೆಯಿಂದ ಮಳೆ ಸಂತ್ರಸ್ತರಿಗೆ ಅಧಿಕಾರಿಗಳು ಚೆಕ್ ಕೊಡುತ್ತಿದ್ದಾರೆ. ದಯವಿಟ್ಟು ಇನ್ನೊಮ್ಮೆ ನೀವೆ ಚೆಕ್ ಮಾಡಿಕೊಳ್ಳಿ ಎಂದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ