Breaking News
Home / ಅಂತರಾಷ್ಟ್ರೀಯ / Big Breaking ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಬಗ್ಗೆ ಹೇಳಿದ್ದೇನು ಗೊತ್ತಾ exclusive Byte

Big Breaking ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಬಗ್ಗೆ ಹೇಳಿದ್ದೇನು ಗೊತ್ತಾ exclusive Byte

Spread the love

ಮಾಜಿ ಸಚಿವರು ಆಗಿರುವ ಕಾಂಗ್ರೆಸ್ ನಾಯಕ ಪ್ರಕಾಶ ಹುಕ್ಕೇರಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ತೀವ್ರ ವಾಗ್ದಾಳಿ ನಡೆಸಿದ್ದು, ಅವರಿಗೆ ಇದ್ದಕ್ಕಿದ್ದಂತೆ ಬಿಜೆಪಿ ಮೇಲೆ ಪ್ರೀತಿ ಬಂದಿದೆ, ಕಾಂಗ್ರೆಸ್ ನಿಂದ ಒಂದು ಹೆಜ್ಜೆ ಹೊರಗಿಟ್ಟು ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಗಳ ಸುರಿಮಳೆಗೈಯ್ದಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿ,
ಪ್ರಕಾಶ ಹುಕ್ಕೇರಿ ಈಗಾಗಲೇ ಬಿಜೆಪಿ ಪರ ವಾಲಿ ಮಾತನಾಡುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಸಂಸದರೂ ಆಗಿರುವ ಪ್ರಕಾಶ ಹುಕ್ಕೇರಿ ಗಂಭೀರ ರಾಜಕಾರಣಿಯೇನಲ್ಲ. ಅವರು ಕಾಂಗ್ರೆಸ್ ನಲ್ಲಿ ಇದ್ದರೂ ಒಳ್ಳೆಯದು. ಹೋದರೂ ಒಳ್ಳೆಯದು. ನಾವೇನು ಕಾಂಗ್ರೆಸ್ ಹೈಕಮಾಂಡ್ ಎದುರು ಹೊರಹಾಕಿ, ಇಟ್ಟುಕೊಳ್ಳಿ ಎಂದು ಹೇಳುವುದಿಲ್ಲ.

ಕಾಂಗ್ರೆಸ್ ನಲ್ಲಿದ್ದು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವ ಪ್ರಕಾಶ ಹುಕ್ಕೇರಿ ಹೇಳಿಕೆ ಖಂಡನೀಯವೆಂದರು. ಅವರು ಮೊನ್ನೆ ನೀಡಿದ ಹೇಳಿಕೆ ಪ್ರಕಾಶ ಹುಕ್ಕೇರಿ ಅವರ ವ್ಯಕ್ತಿತ್ವ, ಪಕ್ಷ ನಿಷ್ಠೆ ತೋರಿಸುತ್ತದೆ.

ಅಧಿಕಾರದಿಂದ ವಂಚಿತರಾಗಿ ಹತಾಶರಾಗಿ ಈ ರೀತಿ ಹೇಳಿಕೆ ನೀಡಿರಬಹುದು ಎಂದು ವಿಶ್ಲೇಷಣೆ ಮಾಡಿದರು.ಬಿಜೆಪಿಗೆ ಹೋಗಲು ಅವರಿಗೆ ಮುಕ್ತ ಅವಕಾಶವಿದೆ.ಇದೇ ಕಾರಣಕ್ಕಾಗಿ ಬೇರೆಯವರ ಮೇಲೆ ಆರೋಪ ಮಾಡುವ ಅವಶ್ಯಕತೆಯಿಲ್ಲ. ಸ್ವಂತ ನಿರ್ಣಯ ತೆಗೆದುಕೊಳ್ಳಬೇಕು.

ಅನುದಾನ ಬಂದಿಲ್ಲ ಎಂದು ಯಾರಾದರೂ ಪಕ್ಷ ಬಿಡ್ತಾರಾ.. ಬಿಜೆಪಿ-ಜೆಡಿಎಸ್ ಶಾಸಕರ ಅನುದಾನ ಬಂದಿಲ್ಲ. ಕೆಲವರು ತಮ್ಮ ಪ್ರಭಾವ ಬೆಳೆಸಿ ಅನುದಾನ ತಂದಿದ್ದಾರೆ. ಪ್ರಭಾವ ಬೆಳೆಸುವುದರಲ್ಲಿ ರಾಜ್ಯದಲ್ಲಿಯೇ ನಂ.1 ಆಗಿರುವ ಪ್ರಕಾಶ ಹುಕ್ಕೇರಿ ಸುಮ್ಮನಾಗಿರುವುದೇಕೆ? ಎಂದು ಪ್ರಶ್ನಿಸಿದರು.

ಅವರು ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ. ಈಗ ಇದ್ದಕ್ಕಿದ್ದಂತೆ ಬಿಜೆಪಿ ಮೇಲೆ ಪ್ರೀತಿ ಬಂದಿದೆ. ಅವರು ಈಗ ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿರುವಾಗ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಪ್ರಕಾಶ ಹುಕ್ಕೇರಿ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾವು ಪ್ರಕಾಶ ಹುಕ್ಕೇರಿ ಅವರನ್ನು ಇಟ್ಟುಕೊಳ್ಳಿ, ಹೊರಹಾಕಿ ಎಂದು ನಾವು ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ