Breaking News

ಪ್ರಕಾಶ್ ಹುಕ್ಕೇರಿ ಹೇಳಿಕೆಗೆ ಉಮೇಶ್ ಕತ್ತಿ ಟಾಂಗ್

Spread the love

ಚಿಕ್ಕೋಡಿ: ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಅವರಿಗೆ ಹುಕ್ಕೇರಿ ಮತಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ ಟಾಂ

ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಮಾತನಾಡಿದ ಶಾಸಕ ಕತ್ತಿ, ಪ್ರಕಾಶ್ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಬದಲು ಬೆಳಗಾವಿ ಲೋಕಸಭೆಗೆ ದಿವಂಗತ ಸುರೇಶ ಅಂಗಡಿ ಅವರ ಪತ್ನಿಯ ಅವಿರೋಧ ಆಯ್ಕೆಗೆ ಶ್ರಮಿಸಬೇಕಿದೆ. ಕೂಡಲೇ ಕಾಂಗ್ರೆಸ್ ಹೈ ಕಮಾಂಡ್ ಜೊತೆಗೆ ಪ್ರಕಾಶ್ ಹುಕ್ಕೇರಿ ಚರ್ಚಿಸಿ ಬೆಳಗಾವಿ ಲೋಕಸಭೆಗೆ ಅಭ್ಯರ್ಥಿಯನ್ನ ಹಾಕದಂತೆ ಮನವಿ ಮಾಡಲಿ ಎಂದು ಹೇಳಿದರು.

ಪ್ರಕಾಶ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಉಮೇಶ್ ಕತ್ತಿ ಹೇಳಿದರು. ಸುರೇಶ್ ಅಂಗಡಿ ಪತ್ನಿಗೆ ಟಿಕೆಟ್ ನೀಡಿದರೆ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ನಾನೇ ಹೋಗಿ ಪ್ರಚಾರ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಇತ್ತಿಚೇಗೆ ಹೇಳಿಕೆ ನೀಡಿದ್ದರು.

ಗ್ ನೀಡಿದ್ದಾರೆ.

 


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ