Breaking News

ಸಚಿವರಿಗೆ ಮನವಿ ಸಲ್ಲಿಸಿ ಸುಸ್ತು- ಗ್ರಾಮಸ್ಥರಿಂದಲೇ ಬಸ್ ನಿಲ್ದಾಣ ನಿರ್ಮಾಣ

Spread the love

ಕಾರವಾರ: ನಮ್ಮೂರಿಗೊಂದು ಬಸ್ ನಿಲ್ದಾಣ ನಿರ್ಮಿಸಿ ಎಂದು ಮನವಿ ಸಲ್ಲಿಸಿದರೂ ಪ್ರಯೋಜನ ಆಗಿರಲಿಲ್ಲ. ಕೊನೆಗೆ ಗ್ರಾಮಸ್ಥರೇ ತಮ್ಮ ಹಣದಿಂದಲೇ ತಮ್ಮೂರಿಗೆ ಬಸ್ ನಿಲ್ದಾಣ ನಿರ್ಮಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಸಚಿವ ಶಿವರಾಂ ಹೆಬ್ಬಾರ್ ಸ್ವಕ್ಷೇತ್ರ ಯಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮಸ್ಥರು ಶ್ರಮದಾನದ ಮೂಲಕ ಬಸ್ ನಿಲ್ದಾಣ ನಿರ್ಮಿಸಿದ್ದಾರೆ.

ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಮಾರ್ಗದಲ್ಲಿ ತೆರಳುವಾಗ ಗ್ರಾಮದಲ್ಲಿ ಯಾವುದೇ ಬಸ್ ತಂಗುದಾಣದ ವ್ಯವಸ್ಥೆ ಇರಲಿಲ್ಲ. ಇದರಿಂದ ವಿದ್ಯಾರ್ಥಿಗಳು, ಗರ್ಭಿಣಿಯರು ಹಾಗೂ ವಯಸ್ಸಾದವರು ಪರದಾಡುವಂತಾಗಿತ್ತು. ಈ ಬಗ್ಗೆ ಹಲವು ವರ್ಷಗಳಿಂದ ಸಚಿವರಿಗೆ ಮನವಿ ನೀಡುತ್ತಾ ಬಂದಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ.

ಇದರಿಂದ ಬೇಸತ್ತಿದ್ದ ಊರ ಜನರೇ ಒಟ್ಟಾಗಿ ಮರಳು, ಕಲ್ಲು, ಸಿಮೆಂಟ್ ಇತ್ಯಾದಿ ಅಗತ್ಯ ಸಾಮಾನುಗಳನ್ನು ಹೊಂದಿಸಿಕೊಂಡಿದ್ದಾರೆ. ಊರಿನ ಟೈಲ್ಸ್ ಮೇಸ್ತ್ರಿ, ವೆಲ್ಡಿಂಗ್ ವರ್ಕ್ಸ್ ಮತ್ತು ಗೌಂಡಿಗಳ ಸಹಾಯದಿಂದ ಬಿಡುವಿನ ಸಮಯದಲ್ಲಿ ಕೆಲಸ ಮಾಡಿ ಬಸ್ ತಂಗುದಾಣವನ್ನು ನಿರ್ಮಿಸಿದ್ದಾರೆ. ಕೇವಲ ಒಂದು ವಾರದಲ್ಲಿ ಬಸ್ ನಿಲ್ದಾಣ ನಿರ್ಮಿಸಿ, ಉದ್ಘಾಟನೆ ಸಹ ಮಾಡಿದ್ದಾರೆ.


Spread the love

About Laxminews 24x7

Check Also

ಜೂನ್ ಒಳಗೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ

Spread the loveಕಾರವಾರ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ