Breaking News

ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.

Spread the love

ಗೋಕಾಕ: ಕಳೆದ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.

ಶೇ. 100 ರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ತಲಾ 7 ಶಾಲೆಗಳಿಗೆ ತಲಾ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಜೊತೆಗೆ ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಗೆ ಹೆಚ್ಚಿನ ಮಹತ್ವ ನೀಡಿ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಟಿ.ಆರ್ ಕಾಗಲ, ಮಡ್ಡೆಪ್ಪ ತೊಳಿನವರ, ಮುಖಂಡರಾದ ಭೀಮನಗೌಡ ಪೋಲೀಸಗೌಡರ, ಬಿಇಓ ಜಿ.ಬಿ ಬಳಗಾರ ಸೇರಿದಂತೆ ವಿವಿಧ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ