Breaking News
Home / ಅಂತರಾಷ್ಟ್ರೀಯ / ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ ,

ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ ,

Spread the love

ನವೆಂಬರ್ 3 ರಂದು ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ , ಹಣದ ಆಮಿಷವೊಡ್ಡುತ್ತಿರುವ ಕುರಿತು ಅರೋಪ- ಪ್ರತ್ಯಾರೋಪಗಳ ಪ್ರಕ್ರಿಯೆಯೂ ಶುರುವಿಟ್ಟುಕೊಂಡಿದೆ .

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ , ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರನ್ನೊಳಗೊಂಡ ನಿಯೋಗವೊಂದು , ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಮುಖ್ಯ ಚುನಾವಣೆ ಅಧಿಕಾರಿಗೆ ಇಂದು ದೂರು ನೀಡಿತು .

ದೂರು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತಾಡಿದ ಅಹ್ಮದ್, ”ಬಿಜೆಪಿ ನಾಯಕರು ಹಣ ಹಂಚುವುದರ ಜೊತೆಗೆ ತಮಗೆ ವೋಟು ನೀಡಿದರೆ ಮಾತ್ರ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವುದಾಗಿ ಮತದಾರರನ್ನು ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ . ಹಣ ಹಂಚುತ್ತಿರುವ ಬಗ್ಗೆ ವಿಡಿಯೊ ಸಾಕ್ಷ್ಯವನ್ನು ಸಹ ಆಯೋಗಕ್ಕೆ ಒದಗಿಸಿದ್ದೇವೆ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ವಿನಂತಿಸಿಕೊಂಡಿದ್ದೇವೆ ,” ಎಂದರು .


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ