Breaking News

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಿಜೆಪಿಗೆ ಧಮ್ ಇದೆಯಾ ಎಂಬ ಪ್ರಶ್ನೆ ಕಮಲ ನಾಯಕರನ್ನು ಕೆರಳಿಸಿದೆ

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಿಜೆಪಿಗೆ ಧಮ್ ಇದೆಯಾ ಎಂಬ ಪ್ರಶ್ನೆ ಕಮಲ ನಾಯಕರನ್ನು ಕೆರಳಿಸಿದ್ದು, ಸಿದ್ದು ವಿರುದ್ಧ ವಾಗ್ದಾಳಿಗಳ ಸುರಿಮಳೆಗಳೇ ಬರುತ್ತಿದೆ.

ನಗರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ಸಿದ್ದರಾಮಯ್ಯ ಬಿಜೆಪಿಗೆ ಧಮ್ ಇದೆಯಾ ಅಂತ ಕೇಳ್ತಾರೆ. ನಮಗೆ ಧೈರ್ಯ ಇರೋದಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗ್ತಿದೆ. 370 ವಿಧಿ ರದ್ದು ಮಾಡಿದ್ದು ಬಿಜೆಪಿ, ಇದು ಬಿಜೆಪಿಯ ಧೈರ್ಯ. ತ್ರಿವಳಿ ತಲಾಕ್ ರದ್ದು ಮಾಡಿದ್ದು ಇದೇ ಬಿಜೆಪಿ ಎಂದು ಮಾತಿನ ಚಾಟಿ ಬೀಸಿದರು.ಸಿದ್ದರಾಮಯ್ಯಗೆ ಧಮ್ ಇದ್ದರೆ ಅಡಾಕ್ ಅಧ್ಯಕ್ಷರನ್ನ ತೆಗೆದು ಬೇರೆ ಅಧ್ಯಕ್ಷರನ್ನ ಮಾಡಲಿ. ಸಿದ್ದರಾಮಯ್ಯಗೆ ಧೈರ್ಯ ಇದ್ದರೆ ಎಐಸಿಸಿಗೆ ಪತ್ರ ಬರೆದು ಅಧ್ಯಕ್ಷರ ಬದಲಾವಣೆ ಮಾಡಿಸಲಿ ಎಂದು ಇದೇ ವೇಳೆ ಅಶೋಕ್ ಸವಾಲೆಸೆದರು.


Spread the love

About Laxminews 24x7

Check Also

ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ

Spread the loveಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಯಲಹಂಕದಲ್ಲಿ  ನಡೆದಿದ್ದು, ಪತಿ  ವಿರುದ್ಧ ಕೊಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ