Breaking News

ಪಿಪಿಇ ಕಿಟ್ ಧರಿಸಿ ಮತ ಚಲಾಯಿಸಿದ ಕೊರೊನಾ ಸೋಂಕಿತರು

Spread the love

ಧಾರವಾಡ/ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಕೊನೆಯ ಒಂದು ತಾಸು ಮತದಾನ ಅವಧಿಯನ್ನು ಕೋವಿಡ್ ಸೋಂಕಿತರು ತಮ್ಮ ಹಕ್ಕು ಚಲಾಯಿಸಲು ಮೀಸಲಿಡಲಾಗಿತ್ತು. ಈ ವೇಳೆ ಅಣ್ಣಿಗೇರಿ ಪುರಸಭೆಯ ಮತಗಟ್ಟೆ ಸಂಖ್ಯೆ 50ರಲ್ಲಿ ಇಬ್ಬರು ಕೊರೊನಾ ಸೋಂಕಿತರು ಪಿಪಿಇ ಕಿಟ್ ಧರಿಸಿ ಕೋವಿಡ್ ನಿಯಂತ್ರಣದ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಮತ ಚಲಾಯಿಸಿದರು.

ಹೋಂ ಐಸೋಲೇಷನ್ ನಲ್ಲಿದ್ದ ಓರ್ವ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿದ್ದ ಓರ್ವ ಪಿಪಿಇ ಕಿಟ್ ಧರಿಸಿ ಮತದಾನ ಮಾಡಿದರು. ಇವರು ಮತಗಟ್ಟೆಗೆ ಬಂದು ಹೋಗಲು ಜಿಲ್ಲಾಡಳಿತದಿಂದ ವ್ಯವಸ್ಥೆ ಕಲ್ಪಿಸಲಾಗಿತ್ತು.ಮತದಾನದ ನಂತರ ಮತಗಟ್ಟೆಯನ್ನು ಪುನಃ ಸಂಪೂರ್ಣ ಸ್ಯಾನಿಟೈಸ್ ಮಾಡಲಾಯಿತು ಎಂದು ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ.ಎಸ್. ಎಂ.ಹೊನಕೇರಿ ಹೇಳಿದ್ದಾರೆ.

 


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ