Breaking News

ಪ್ರೇಮ ಕವಿ, ಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ ಪ್ರಮುಖ ಆರೋಪಿ ಗಂಗಾ ಕುಲಕರ್ಣಿ ವಿಷ ಸೇವಿಸಿ ಆತ್ಮಹತ್ಯೆ

Spread the love

ಕೊಪ್ಪಳ : ಪ್ರೇಮ ಕವಿ, ಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ ಪ್ರಮುಖ ಆರೋಪಿ ಗಂಗಾ ಕುಲಕರ್ಣಿ ಗುರುವಾರ ಜಿಲ್ಲೆಯ ಕುಷ್ಟಗಿ ನ್ಯಾಯಾಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಯುವಕನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ 3 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ್ದಳು. ಈ  ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಗಂಗಾಳನ್ನು ಪೊಲೀಸರು ಕರೆ ತಂದಿದ್ದರು. ಆದರೆ ಗಂಗಾ ನ್ಯಾಯಾಲಯಕ್ಕೆ ಆಗಮಿಸುವ ಮೊದಲೇ ವಿಷ ಸೇವಿಸಿ ಕೋರ್ಟ್ ಆಗಮಿಸಿದ್ದರು.

ಇದರಿಂದ ಕೋರ್ಟ್ ನಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಸೋಷಿಯಲ್ ಮೀಡಿಯಾದಲ್ಲಿ ಬಿಜೆಪಿ ನಾಯಕರ ವಿರುದ್ಧ ಪೋಸ್ಟ್ – ಸಿಎಂ ವಿರುದ್ಧ ದಾಖಲಾಗಿದ್ದ FIR ರದ್ದು

Spread the loveಬೆಂಗಳೂರು: ಆಕ್ಷೇಪಾರ್ಹ ಹೇಳಿಕೆಗಳನ್ನು ಒಳಗೊಂಡು ಬಿಜೆಪಿ ನಾಯಕರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ