Breaking News

ಭತ್ತ ಕಟಾವು ಯಂತ್ರದ ಬಾಡಿಗೆ ದರ ಗಂಟೆಗೆ ರೂ.1,800 ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿಬೇಕು.

Spread the love

ದಾವಣಗೆರೆ : ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರಿನ ಹಂಗಾಮಿನಲ್ಲಿ 66046 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಸದ್ಯ ಭತ್ತದ ಬೆಳೆಯು ಬಹುತೇಕ ಕಾಳು ಬೆಳೆಯುವ ಹಂತದಲ್ಲಿರುವುದರಿಂದ ಇನ್ನು 2 ರಿಂದ 3 ವಾರಗಳಲ್ಲಿ ಕಟಾವು ಪ್ರಾರಂಭವಾಗಲಿದೆ.

ಜಿಲ್ಲೆಯಲ್ಲಿ ಶೇ.95% ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದಾಗಿರುತ್ತದೆ.

ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ ರೂ.2,500 ರಿಂದ ರೂ.3, 000 ಗಳವರೆಗೆ ಬಾಡಿಗೆ ಹಣ ನಿಗದಿಪಡಿಸುತ್ತಿರುವುದು ಕಂಡುಬಂದಿರುವುದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದ್ದು, ಕೋವಿಡ್-19 ಸೋಂಕಿನ ಸಂಕಷ್ಟದ ಸಂದರ್ಭದಲ್ಲಿ ಪ್ರತಿ ಗಂಟೆಗೆ ರೂ.1,800 ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿಬೇಕು.ತಪ್ಪಿದಲ್ಲಿ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಮಗ್ರ ಸಿದ್ಧತೆ:D.C.

Spread the loveಬೆಳಗಾವಿ: ರಾಜ್ಯಾದ್ಯಂತ ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ