ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಮೆರವಣಿಗೆಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಶನಿವಾರ ನಗರದ ಕಿಲ್ಲಾ ಕೋಟೆ ಯ ಮುಂಭಾಗದಿಂದ ಚಾಲನೆ ನೀಡಿದರು.
ಕರೋನಾ ಮಹಾಮಾರಿಯಿಂದಾಗಿ ಅತ್ಯಂತ ಸರಳ ರೀತಿಯಲ್ಲಿ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಲಾಯಿತು. ಕಿಲ್ಲಾ ಕೋಟೆಯ ಮುಂಭಾಗದಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣನ ವೃತ್ತ, ಕೋಟ್೯ ಮಾರ್ಗವಾಗಿ ಚನ್ನಮ್ಮ ವೃತ್ತದಿಂದ ಜಿಪಂ ಸಭಾಂಗಣದ ವರೆಗೆ ಸಾಗಿತು.
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಶಾಸಕ ಅನಿಲ್ ಬೆನಕೆ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್., ನಗರ ಪೊಲೀಸ್ ಆಯುಕ್ತ ಡಾ.ತ್ಯಾಗರಾಜನ್, ಡಿಸಿಪಿಗಳಾದ ಡಾ. ವಿಕ್ರಮ್ ಆಮಟೆ, ಸಿ.ಐ.ನೀಲಗಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Laxmi News 24×7