Breaking News

24 ಗಂಟೆಗಳಲ್ಲಿಯೇ 195 ಕೋಟಿ ರೂ ಅನುದಾನ ಬಿಡುಗಡೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

Spread the love

ವಿಜಯಪುರ: ‘ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅನೇಕ ಬಾರಿ ಭೇಟಿಯಾಗಿದ್ದೆ. ವಿಜಯಪುರಕ್ಕೆ ಅನುದಾನ ಬಿಡುಗಡೆ ಮಾಡುವ ಸಂಬಂಧ ಮನವಿ ಮಾಡಿದ್ದಾಗ ಅನುದಾನದ ಭರವಸೆ ನೀಡಿದ್ದರು. ಆದರೆ ಬಿಡುಗಡೆ ಮಾಡಿರಲಿಲ್ಲ. ಆದರೆ ಮೊನ್ನೆ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಿದ್ದರ ಫಲವಾಗಿ ಕೇವಲ 24 ಗಂಟೆಗಳಲ್ಲಿಯೇ 195 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ, ಉತ್ತರ ಕರ್ನಾಟಕದವರೊಬ್ಬರು ಮುಖ್ಯಮಂತ್ರಿ ಆಗಲಿದ್ದಾರೆ ಎನ್ನುವ ಮೂಲಕ ಬಸನಗೌಡ ಪಾಟೀಲ್ ಯತ್ನಾಳ ಬಿಜೆಪಿಯಲ್ಲಿ ಕಿಡಿ ಹಚ್ಚಿಸಿದ್ದರು. ಇದರಿಂದ ಪಕ್ಷದೊಳಗೆ ತೀವ್ರ ವಾಗ್ವಾದಗಳು ಕೂಡ ನಡೆದಿದ್ದವು. ಆರೋಪ ಪ್ರತ್ಯಾರೋಪಗಳಿಗೆ ರಾಜ್ಯದ ಜನ ಸಾಕ್ಷಿಯಾಗಿದ್ದರು.


Spread the love

About Laxminews 24x7

Check Also

ಗ್ಯಾರಂಟಿ ಅನುಷ್ಠಾನ ಸಮಿತಿಗೆ ವಿರೋಧ….

Spread the loveಇಂದು ಮತ್ತೇ ಸದನದ ಭಾವಿಗಿಳಿದು ಪ್ರತಿಭಟಿಸಿದ ಬಿಜೆಪಿ ಸದಸ್ಯರು ಸದನದ ಕಾರ್ಯಕಲಾಪವನ್ನು ಮುಂದೂಡಿದ ಸಭಾಪತಿಗಳು ಇಂದು ವಿಧಾನಮಂಡಳದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ