Breaking News
Home / ಅಂತರಾಷ್ಟ್ರೀಯ / ರಾಜ್ಯೋತ್ಸವ ಆಚರಣೆಗೆ ಸಿಂಗಾರಗೊಂಡ ಬೆಳಗಾವಿ

ರಾಜ್ಯೋತ್ಸವ ಆಚರಣೆಗೆ ಸಿಂಗಾರಗೊಂಡ ಬೆಳಗಾವಿ

Spread the love

ಬೆಳಗಾವಿ- ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯಾದ್ಯಂತ ಮಹದಾನಂದ ಮತ್ತು ಚಟುವಟಿಕೆಯಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳು ರಾಜ್ಯದ ಎಲ್ಲೆಡೆ ಹಾರಿಸಲ್ಪಡುತ್ತವೆ. ಕನ್ನಡ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ”ಯನ್ನು ಹಾಡಲಾಗುತ್ತದೆ. ಸರ್ಕಾರಿ ಕಚೇರಿ ಮತ್ತು ಹಲವಾರು ಪ್ರಮುಖ ಪ್ರದೇಶಗಳಲ್ಲಿ ವಾಹನಗಳ ಮೇಲೆ ಭುವನೇಶ್ವರಿ ಚಿತ್ರವನ್ನಿಟ್ಟು ಮೆರವಣಿಗೆ ನಡೆಸಲಾಗುತ್ತದೆ.
ಚನ್ನಮ್ಮಾಜಿಯ ಹೋರಾಟದ ಚಿತ್ರಣ,ಕಿತ್ತೂರು ಕೋಟೆಯ ಗತವೈಭವ ಮರಕಳಿಸುವ ಅಲಂಕಾರವನ್ನು ಚನ್ನಮ್ಮನ ಮೂರ್ತಿಯ ನಾಲ್ಕು ದಿಕ್ಕುಗಳಲ್ಲಿ ಬೇರೆ,ಬೇರೆ ಚಿತ್ರಗಳನ್ನು ಅಳವಡಿಸಿ,ಈ ವೃತ್ತಕ್ಕೆ ಹೊಸ ಮೆರಗು

 

ಬೆಳಗಾವಿ ಮಹಾನಗರ ಪಾಲಿಕೆ ಈ ವರ್ಷ ಚನ್ನಮ್ಮನ ವೃತ್ತಕ್ಕೆ ಹೊಸ ಲುಕ್ ನೀಡುವ ಮಹತ್ವದ,ಎಲ್ಲರೂ ಮೆಚ್ಚುವಂತಹ ಕಾರ್ಯವನ್ನು ಸದ್ದಿಲ್ಲದೇ ಮಾಡುತ್ತಿರುವದು ಕನ್ನಡ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಳಗಾವಿಯ ಐತಿಹಾಸಿಕ ಚನ್ನಮ್ಮ ವೃತ್ತಕ್ಕೆ ವೀರರಾಣಿ ಚನ್ನಮ್ಮಾಜಿಯ ಇತಿಹಾಸದ ಗತವೈಭವ.
ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ. ಸರ್ಕಾರ ಮೆರವಣಿಗೆ ಆಟೋ ರಿಕ್ಷಾಗಳು ಮತ್ತು ಇತರೆ ವಾಹನಗಳು ಕನ್ನಡ ಧ್ವಜದ ಬಣ್ಣಗಳಾದ ಕೆಂಪು ಮತ್ತು ಹಳದಿ ವರ್ಣಗಳ ಬಾವುಟ ದೊಂದಿಗೆ ಅಲಂಕರಿಸಲಾಗಿರುತ್ತವೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ.
ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ