Breaking News

ಇದೇ‌ ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ.

Spread the love

ಬೆಳಗಾವಿ: ಕುಂದಾನಗರಿಯಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಆದರೆ ಎಂಇಎಸ್ ಈ ದಿನವನ್ನು ಕರಾಳ ದಿನವಾಗಿ ಆಚರಿಸಲು ಮುಂದಾಗಿದ್ದು ಇದೇ ಮೊದಲ ಬಾರಿಗೆ ಮುಖಭಂಗವಾಗಿದೆ.

ಇದೇ‌ ಮೊದಲ ಬಾರಿಗೆ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ. ಜಿಲ್ಲಾಧಿಕಾರಿ ಎಂ‌ಜಿ ಹಿರೇಮಠ ಕರಾಳ ದಿನಾಚರಣೆ ಮಾಡದಂತೆ ಖಡಕ್ ಆದೇಶ ನೀಡಿದ್ದಾರೆ. ಜಿಲ್ಲಾಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ನಾಡದ್ರೋಹಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. 10 ಗಂಟೆಗೆ ಶಿವಾಜಿ ಗಾರ್ಡನ್ ಬಳಿ ಪ್ರತಿಭಟನೆಗೆ ಪ್ಲಾನ್ ಮಾಡಿಕೊಂಡಿದ್ದಾರೆ.

ಮನೆಯ ಮಹಡಿ ಮೇಲೆ ನಿಂತು ಕಪ್ಪು ಬಲೂನ್​ಗಳನ್ನ ಹಾರಿ ಬಿಡಲು ಸಿದ್ದತೆ ಮಾಡಿಕೊಂಡಿದ್ದಾರೆ. ನಾಡದ್ರೋಹಿಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ ಬೆಂಬಲವಿದೆ. ಅಲ್ಲದೆ ಇಂದು ಮಹಾರಾಷ್ಟ್ರದಲ್ಲಿ ಸಚಿವರೆಲ್ಲರೂ ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಸ ಮಾಡಲಿದ್ದಾರೆ.

ಬೆಳಗಾವಿ ನಗರದಾದ್ಯಂತ ಪೊಲೀಸ್ ಹೈ ಅಲರ್ಟ್ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಆಯಾಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ

Spread the love ಇವತ್ತು ನೀರು ಕಡಿಮೆಯಾಗುತ್ತೆ:ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ ನದಿತೀರದ ಜನರಲ್ಲಿ ಅಭಯ ಚಿಕ್ಕೋಡಿ: ಕೃಷ್ಣಾ ಸೇರಿದಂತೆ ದೂಧಗಂಗಾ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ