Breaking News

65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ.

Spread the love

 

 

ನವದೆಹಲಿ: 65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನಾಡಿನೆಲ್ಲೆಡೆ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರು ಕನ್ನಡದಲ್ಲಿಯೇ ಶುಭಾಶಯ ಕೋರಿರುವ ಹಿನ್ನಲೆಯಲ್ಲಿ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ರೀ ಟ್ವೀಟ್ ಮಾಡುತ್ತಿದ್ದಾರೆ.

ಈ ಮೂಲಕ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ.

 

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ