ಮೈಸೂರು: ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಶೇ.100 ರಷ್ಟು ಮುನಿರತ್ನ ಗೆಲ್ಲುತ್ತಾರೆ. ಆರ್‍ಆರ್ ನಗರ ಕ್ಷೇತ್ರವನ್ನು ಮುನಿರತ್ನ ಅಭಿವೃದ್ಧಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಮನೆಯಿಂದ ಕ್ಷೇತ್ರದ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಕಿಡಿಕಾರಿದರು.
ನಗರದ ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಆದಾಯ ಹೆಚ್ಚಿದೆ. ಹೀಗಾಗಿ ಅಭಿವೃದ್ಧಿ ಹಣ ಬಿಡುಗಡೆಯಾಗಿದೆ. ಬಜೆಟ್ ನಲ್ಲಿ ಕೊಟ್ಟ ಹಣವನ್ನು ಮುನಿರತ್ನ ಸರಿಯಾಗಿ ಅವರ ಕ್ಷೇತ್ರಕ್ಕೆ ಬಳಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರ ಮನೆಯಿಂದ ಹಣ ತಂದು ಕೊಟ್ಟಿಲ್ಲ. ಲಾಕ್‍ಡೌನ್ ಸಮಯದಲ್ಲಿ ಕಾಂಗ್ರೆಸ್ ನವರು ಒಂದು ಗ್ಲಾಸ್ ನೀರೂ ಕೊಟ್ಟಿಲ್ಲ ಎಂದು ಹರಿಹಾಯ್ದರು. ನಗರದ ಅರಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಆದಾಯ ಹೆಚ್ಚಿದೆ. ಹೀಗಾಗಿ ಅಭಿವೃದ್ಧಿ ಹಣ ಬಿಡುಗಡೆಯಾಗಿದೆ. ಬಜೆಟ್ ನಲ್ಲಿ ಕೊಟ್ಟ ಹಣವನ್ನು ಮುನಿರತ್ನ ಸರಿಯಾಗಿ ಅವರ ಕ್ಷೇತ್ರಕ್ಕೆ ಬಳಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರ ಮನೆಯಿಂದ ಹಣ ತಂದು ಕೊಟ್ಟಿಲ್ಲ. ಲಾಕ್‍ಡೌನ್ ಸಮಯದಲ್ಲಿ ಕಾಂಗ್ರೆಸ್ ನವರು ಒಂದು ಗ್ಲಾಸ್ ನೀರೂ ಕೊಟ್ಟಿಲ್ಲ ಎಂದು ಹರಿಹಾಯ್ದರು.