Breaking News

ನನ್ನ ಮಹದಾಯಿ ಹೇಳಿಕೆ ತಿರುಚಲಾಗಿದೆ : ದಿನೇಶ್ ಗುಂಡುರಾವ್

Spread the love

ಬೆಂಗಳೂರು, ನ.1- ಮಹದಾಯಿ ವಿವಾದ ಕುರಿತಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ವರದಿ ಮಾಡಲಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಸುದ್ದಿ ಮಾಡಲಾಗಿದೆ. ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದದ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿದೆ. ಅಂತಿಮವಾಗಿ ಈ ವಿವಾದವನ್ನು ನ್ಯಾಯಾಲಯವೇ ಇತ್ಯರ್ಥ ಪಡಿಸಬೇಕು ಎಂಬುದು ನನ್ನ ಅಭಿಪ್ರಾಯವಾಗಿತ್ತು ಎಂದಿದ್ದಾರೆ.

ಆದರೂ, ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿದ್ದರೆ ಈ ವಿವಾದ ಶೀಘ್ರ ಇತ್ಯರ್ಥವಾಗುತಿತ್ತು ಎಂದು ಮತ್ತೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ಈ ನನ್ನ ಹೇಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ದಿನೇಶ್ ಗುಂಡುರಾವ್ ಸ್ಪಷ್ಟ ಪಡಿಸಿದ್ದಾರೆ. ಮಹದಾಯಿ ಇರಬಹುದು, ಕಾವೇರಿ ಇರಬಹುದು ಆಯಾಯ ರಾಜ್ಯದ ರಾಜಕೀಯ ಪಕ್ಷಗಳು ಆ ರಾಜ್ಯದ ಅನುಕೂಲಕ್ಕೆ ತಕ್ಕಂತೆ ನಿಲುವು ತೆಗೆದುಕೊಂಡಿರುತ್ತವೆ ಎಂಬುದು ನನ್ನ ಹೇಳಿಕೆಯಾಗಿತ್ತು ಎಂದಿದ್ದಾರೆ.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ