Breaking News

ಈ ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ:ಬಸವರಾಜ ಬೊಮ್ಮಾಯಿ

Spread the love

ಹಾವೇರಿ:  ಈ ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ಯೋಜಿಸಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್  ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಇಳಿಮುಖವಾದ ನಂತರ ಸಮ್ಮೇಳನಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು.

 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಾವಾಗ ನಡೆಸಬೇಕು ಎಂಬ ಕುರಿತು ಪರಿಷತ್ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿ ಚರ್ಚಿಸಿ ನಂತರ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಹೇಳಿದರು.

ಸಿಎಂ ಬದಲಾವಣೆ  ವಿಚಾರವಾಗಿ   ಪ್ರತಿಕ್ರಿಯಿಸಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಸಂಪೂರ್ಣ ಅವಧಿ ಪೂರೈಸಲಿದ್ದಾರೆ. ಮುಂದಿನ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿದೆ ಎಂದರು.


Spread the love

About Laxminews 24x7

Check Also

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Spread the loveಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ