*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ
ಗೋಕಾಕ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಒಳ್ಳೆಯ ಬೆಳವಣಿಗೆ, ನಗರ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಗೋಕಾಕ ನಗರಸಭೆ ಬಿಜೆಪಿ ಗೆಲವು ವಿಚಾರವಾಗಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿ ಅವಿರೋಧ ಆಯ್ಕೆಗೆ ನಿರ್ಧಾರ ತಗೆದುಕೊಂಡಿದ್ದರು. ಅದೇ ರೀತಿ ನಗರ ಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಶ್ರಮಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿರುವುದರಿಂದ ಗೋಕಾಕ ನಗರ ಮತ್ತಷ್ಟು ಅಭಿವೃದ್ದಿಯಾಗಲು ಸಹಕಾರಿಯಾಗಲಿದೆ ಎಂದು ಹೇಳಿದರು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರು ಸಚಿವ ರಮೇಶ ಜಾರಕಿಹೊಳಿ ಅವರೊಂದಿಗೆ ಕೈ ಜೋಡಿಸಿ ಗೋಕಾಕ ಅಭಿವೃದ್ದಿಗೆ ಶ್ರಮಿಸಬೇಕು. ಮೂಲ ಸೌಕರ್ಯಗಳಾದ ರಸ್ತೆ, ನೀರು, ಒದಗಿಸಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
Laxmi News 24×7