Breaking News

ಈಗಾಗಲೇ 10 ತಿಂಗಳಿನಿಂದ ಮಕ್ಕಳಿಗೆ ಶಾಲೆ ಇಲ್ಲದೇ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ

Spread the love

ಬೆಂಗಳೂರು, – ಶಾಲಾ ಕಾಲೇಜುಗಳ ಆರಂಭದ ಬಗ್ಗೆ ಮೂರು ದಿನಗಳ ಕಾಲ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್‍ರವರು ವಾರಾಂತ್ಯದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ನವೆಂಬರ್ 17ರಂದು ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ಈಗಾಗಲೇ ನಿರ್ಧರಿಸಲಾಗಿದೆ. ಶಾಲೆಗಳನ್ನು ಪ್ರಾರಂಭಿಸುವ ಸಂಬಂಧ ಇಂದು ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ಕರೆಯಲಾಗಿತ್ತು.

ತಾಂತ್ರಿಕ ಕಾರಣಗಳಿಂದ ಸಭೆ ರದ್ದಾಗಿದ್ದು, ಇದೇ ನಾಲ್ಕರಿಂದ ಸತತ ಮೂರು ದಿನಗಳ ಎಲ್ಲಾ ಜಿಲ್ಲಾ ಉಪನಿರ್ದೇಶಕರುಗಳು ತಾಲೂಕು ಶಿಕ್ಷಣಾಧಿಕಾರಿಗಳ ಜೊತೆ ಸಭೆ ನಡೆಸಿ ಶಾಲಾ ಕಾಲೇಜುಗಳ ಪ್ರಾರಂಭದ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ. ಆಂಧ್ರ ಪ್ರದೇಶದಲ್ಲಿ ಶಾಲಾ ಕಾಲೇಜುಗಳು ಪ್ರಾರಂಭವಾಗಿದ್ದು, ಅದೇ ಮಾದರಿಯಲ್ಲಿ ನಮ್ಮಲ್ಲೂ ಶಾಲೆಗಳನ್ನು ತೆರೆಯುವ ಸಂಬಂಧ ಚರ್ಚೆ ನಡೆದಿದೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಳವಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು, ಶಾಲಾ- ಕಾಲೇಜು ಗಳನ್ನು ಪ್ರಾರಂಭಿಸಬೇಕೆಂಬ ಚರ್ಚೆ ಆರಂಭವಾಗಿದೆ. ಶಿಕ್ಷಣ ತಜ್ಞರು, ಆರೋಗ್ಯ ತಜ್ಞರು ಹಂತ-ಹಂತವಾಗಿ ಶಾಲಾ ಕಾಲೇಜುಗಳನ್ನು ಆರಂಭಿಸ ಬಹುದೆಂಬ ಸೂಚನೆ ನೀಡಿದ್ದಾರೆ. ಕೇಂದ್ರ ಸರ್ಕಾರವೂ ಕೂಡ ಶಾಲಾ- ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡಿದ್ದು, ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ.

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಇಂದಿನಿಂದ ಶಾಲೆಗಳನ್ನು ಪ್ರಾರಂಭ ಮಾಡಿದ್ದು, ಶಿಕ್ಷಕರು ಮತ್ತು ಸಿಬ್ಬಂದಿಗೆ ಶಾಲೆಗೆ ಬರಲು ಅವಕಾಶ ನೀಡಿದೆ. ಸಾಧಕ- ಬಾಧಕಗಳನ್ನು ನೋಡಿಕೊಂಡು ವಿದ್ಯಾರ್ಥಿಗಳನ್ನು ಶಾಲೆಗೆ ಕರೆಸಿಕೊಳ್ಳುವ ಚಿಂತನೆ ನಡೆಸಿದೆ. ಅದಕ್ಕಾಗಿ ನಾಳೆಯಿಂದ ಮೂರು ದಿನಗಳ ಕಾಲ ಮಹತ್ವದ ಸಭೆ ನಡೆಸಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾದ ಅನ್ಬುಕುಮಾರ್ ಈ ಕುರಿತು ಹೇಳಿಕೆ ನೀಡಿದ್ದು, ಶಾಲೆಗಳಲ್ಲಿ ಸ್ವಚ್ಛತೆ, ಸುರಕ್ಷತೆ ನೋಡಿಕೊಂಡು ಶಾಲೆಗಳನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ. ಶಾಲಾ ಶಿಕ್ಷಕರು, ಸಿಬ್ಬಂದಿ ಮಕ್ಕಳ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಶಾಲೆಗಳನ್ನು ಪ್ರಾರಂಭ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ದಾಖಲಾತಿ ಪ್ರಮಾಣ ಹೆಚ್ಚಳವಾಗಿದೆ. ಶಾಲೆಗಳಲ್ಲಿ ಮಕ್ಕಳು ಮತ್ತು ಸಿಬ್ಬಂದಿಯ ಸುರಕ್ಷತೆ ಮುಖ್ಯವಾಗಿದೆ. ಇದನ್ನೊಳಗೊಂಡಂತೆ ಶಾಲೆಗಳ ಪ್ರಾರಂಭದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯ ಈ ಕ್ರಮಗಳನ್ನು ಮತ್ತು ಕೊರೊನಾ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿರುವುದನ್ನು ಗಮನಿಸಿದರೆ ಶಾಲಾ – ಕಾಲೇಜುಗಳು ತಿಂಗಳ ಹಂತದಲ್ಲಿ ಪ್ರಾರಂಭ ವಾಗುವ ಸಾಧ್ಯತೆಗಳು ಕಂಡು ಬರುತ್ತಿವೆ.

ಈಗಾಗಲೇ 10 ತಿಂಗಳಿನಿಂದ ಮಕ್ಕಳಿಗೆ ಶಾಲೆ ಇಲ್ಲದೇ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ ಎಂಬ ಆಕ್ಷೇಪಗಳೂ ಕೂಡ ಕೇಳಿ ಬಂದಿವೆ. ಆನ್‍ಲೈನ್ ಶಿಕ್ಷಣವೂ ಕೂಡ ಎಲ್ಲರ ಕೈಗೆಟುಕುತ್ತಿಲ್ಲ. ಸರ್ಕಾರ ರೂಪಿಸಿದ ವಿದ್ಯಾಗಮ ಶಿಕ್ಷಣದ ಕ್ರಮವೂ ಕೂಡ ಸಮರ್ಪಕವಾಗಿ ನಡೆಯದೆ ಕೆಲ ಕಾಲ ಸ್ಥಗಿತಗೊಂಡಿತ್ತು. ಈ ಎಲ್ಲಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತ ಎಂಬ ಅಭಿಪ್ರಾಯ ಕೇಳಿ ಬಂದಿವೆ. ಹಾಗಾಗಿ ಶಾಲೆಗಳ ಪ್ರಾರಂಭದ ಸಂಬಂಧ ಮಹತ್ವದ ಸಭೆ ನಡೆಯುತ್ತಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ