Breaking News

9 ಲಕ್ಷ ಮೌಲ್ಯದ, 25 ಬೈಕ್ ಕದ್ದ ಚಾಲಾಕಿ ಕಳ್ಳ

Spread the love

ಯಾದಗಿರಿ: ಇಷ್ಟು ದಿನ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ಚಾಲಾಕಿ ಕಳ್ಳನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, ಪಕ್ಕಾ ಪ್ಲಾನ್ ಮಾಡಿ ಬಲೆ ಬೀಸಿದ್ದು, ಭರ್ಜರಿ ಬೇಟೆಯಾಡಿದ್ದಾರೆ.

ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಬೈಕ್ ಕಳ್ಳತನವಾಗುತ್ತಿದ್ದವು. ಇದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿತ್ತು. ಇದೀಗ ಬೈಕ್ ಕಳ್ಳನನ್ನು ಹಡೆಮುರಿ ಕಟ್ಟಿದ್ದಾರೆ. ಪೊಲೀಸರ ಈ ಕಾರ್ಯದಿಂದ ಹುಸಣಸಗಿ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಜಾಲದ ರೂವಾರಿ ಮೌನೇಶ್(27) ಈಗ ಕಂಬಿ ಏಣಿಸುತ್ತಿದ್ದಾನೆ. ಬಂಧಿತನಿಂದ 9 ಲಕ್ಷಕ್ಕೂ ಅಧಿಕ ಮೌಲ್ಯದ 25 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹಲವು ದಿನಗಳಿಂದ ಯಾದಗಿರಿ ಪೊಲೀಸರಿಗೆ ಬೈಕ್ ಕಳ್ಳತನ ಪ್ರಕರಣಗಳು ತಲೆನೋವಾಗಿದ್ದವು. ಅದರಲ್ಲೂ ಹುಣಸಗಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಸಿಪಿಐ ದೌವಲತ್, ಪಿಎಸ್‍ಐ ಬಾಪುಗೌಡ ನೇತೃತ್ವದಲ್ಲಿ ಯಾದಗಿರಿ ಎಸ್‍ಪಿ ಋಷಿಕೇಶ್ ಭಗವಾನ್ ವಿಶೇಷ ತಂಡ ರಚಿಸಿದ್ದರು. ಪ್ರಕರಣ ಕೈಗೆತ್ತಿಕೊಂಡ ಸಿಪಿಐ ದೌವಲತ್ ಮತ್ತು ಪಿಎಸ್‍ಐ ಬಾಪುಗೌಡ, ಕೆಲವೇ ದಿನಗಳಲ್ಲಿ ಪ್ರಕರಣದ ಆರೋಪಿ ಕಿಂಗ್ ಪಿನ್ ಮೌನೇಶ್ ನನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ

Spread the loveಯಾದಗಿರಿ: ಮಹಲ್ ರೋಜಾದ‌ ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ಕೇಸ್ ಕೈ ಬಿಡುವಂತೆ ಆಗ್ರಹಿಸಿ ಭಕ್ತರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ