ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಕಲಬುರಗಿ ನದರದ ಕೈಲಾಶ್ ನಗರದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಶಿವಲಿಂಗಪ್ಪ ಭೂಶೆಟ್ಟಿ(53) ಎಂದು ಗುರುತಿಸಲಾಗಿದೆ. ಆಳಂದ ತಾಲೂಕಿನ ಕಜಗಂಚಿ ಗ್ರಾಮದ ನಿವಾಸಿಯಾಗಿರುವ ಶಿವಲಿಂಗಪ್ಪ ಕಲಬುರಗಿ ನಗರದ ಕೈಲಾಶ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಕಳೆದ ರಾತ್ರಿ ಮನೆ ಬಳಿ ನಿಂತಿದ್ದ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Laxmi News 24×7