ಮೈಸೂರು: ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ. ಚೆಸ್ಕಾಂನ ತ್ಯಾಗರಾಜು, ಮಹೇಂದ್ರ, ಮಲ್ಲೇಶ್ ಎಂಬ ಮೂವರು ಕೆಇಬಿ ನೌಕರರಿಗೆ ಗಂಭೀರ ಗಾಯಗಳಾಗಿವೆ.
ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು, ನೌಕರರು ವಿದ್ಯುತ್ ಕಂಬದಿಂದ ಬೀಳುತ್ತಿರುವ ದೃಶ್ಯ ಸೆರೆ ಹಿಡಿದಿದ್ದಾರೆ.