Breaking News

ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ

Spread the love

ವಿಜಯಪುರ : ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ ನಾನು ಒಬ್ಬ ಪೊಲೀಸ್ ಆಗಿದ್ದು, ನನ್ನ ತಂದೆಯ ಜೀವ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಸಾರ್ವಜನಿಕರ ಪಾಡೇನು ಎಂದು ಜಿಲ್ಲೆಯ ಸಿಂದಗಿಇ ತಾಲೂಕಿನ ಬಂಟನೂರು ಗ್ರಾಮದ ನಿವಾಸಿ ಬಸವರಾಜ ಪಾಟೀಲ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಸವರಾಜ್ ಅವರು ಕಳೆದ 13 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಅವರು ಬೆಂಗಳೂರಿನ ಯಲಹಂಕ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದಾರೆ. ತಮ್ಮ ತಂದೆ ಹನಮಂತರಾಯ ಅವರ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಇಂದು ಗೋಕಾಕ ನಗರದ ಗೃಹಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳನ್ನು ಆಲಿಸಿದೆ.

Spread the love ಇಂದು ಗೋಕಾಕ ನಗರದ ಗೃಹಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳನ್ನು ಆಲಿಸಿದೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ