Breaking News

ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರರನ್ನು ಸಿಬಿಐ ಅಧಿಕಾರಿಗಳ ವಶಕ್ಕೆ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ

Spread the love

ಧಾರವಾಡ : ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರರನ್ನು ಸಿಬಿಐ ಅಧಿಕಾರಿಗಳು ಇಂದು ವಶಕ್ಕೆ ಪಡೆದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಧಾರವಾಡದ ಉಪನಗರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಕಾಂಗ್ರೆಸ್‌ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಹಾಗೂ ಅವರ ಸಹೋದರ ವಿಜಯ ಕುಲಕರ್ಣಿ ಅವರನ್ನು ಸಿಲುಕಿಸಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕು ಇದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದೂರು ಕೊಟ್ಟವರಿಂದ ಬಲವಂತವಾಗಿ ಹೇಳಿಕೆಗಳನ್ನು ಪಡೆಯಲಾಗುತ್ತಿದೆ’ ಎಂದು ಅವರು ದೂರಿದರು.

ಸಚಿವ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಠಾಣೆ ಸುತ್ತ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡುವ ಮೂಲಕ ಬಂದೋಬಸ್ತ್ ಮಾಡಲಾಗಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ