Breaking News

ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳ ತೆರವು

Spread the love

ಬೆಂಗಳೂರು: ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಮಾಡಿದ್ದಾರೆ.

ಕಳೆದ ತಿಂಗಳು ವಕೀಲರದ ಹರ್ಷ ಮುತಾಲಿಕ್, ಮಸೀದಿಯಲ್ಲಿನ ಧ್ವನಿ ವರ್ಧಕಗಳಿಂದ ಇತರೇ ಧರ್ಮದರಿಗೆ ತೊಂದರೆ ಆಗುತ್ತಿದೆ. ದಿನಕ್ಕೆ ಐದಾರು ಬಾರಿ ಪ್ರಾರ್ಥನೆ ಮಾಡಲಾಗತ್ತೆ. ಇದ್ದರಿಂದ ಮಕ್ಕಳಿಗೆ, ವಯಸ್ಸಾದವರಿಗೆ, ಹೃದಯ ಸಂಬಂಧಿ ಖಾಯಿಲೆ ಇರುವವರಿಗೆ ತೊಂದರೆಯಾಗುತ್ತಿದೆ.

ಹಾಗಾಗಿ ಮಸೀದಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧ ಮಾಡಬೇಕು ಎಂದು ದೂರು ನೀಡಿದ್ದರು.ಈಗ ಈ ದೂರಿಗೆ ಸ್ಪಂದಿಸಿದ ಡಿಜಿ ಪ್ರವೀಣ್ ಸೂದ್ ರಾಜ್ಯದ ಎಲ್ಲ ಜಿಲ್ಲೆಗಳ ಎಸ್‍ಪಿಗಳಿಗೆ ಹಾಗೂ ನಗರದ ಕಮಿಷನರ್‍ಗೆ ಪತ್ರ ಬರೆದಿದ್ದು, ರಾಜ್ಯಾದ್ಯಂತ ಮಸೀದಿಗಳಲ್ಲಿ ಹಾಕಿರುವ ಅನಧಿಕೃತ ಧ್ವನಿವರ್ಧಕ ತೆರವಿಗೆ ಆದೇಶ ಮಾಡಿದ್ದಾರೆ. ಜೊತೆಗೆ ಯಾವುದೇ ಅನಧಿಕೃತ ಧ್ವನಿವರ್ಧಕ ಬಳಕೆ ಮಾಡಿದ್ದರೆ, ಅದರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ತೆರವುಗೊಳಿಸಲು ಸೂಚಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ