Breaking News

ಕೆಪಿಸಿಸಿ ಅಧ್ಯಕ್ಷ ದಿಢೀರ್ ದೆಹಲಿಗೆ – ಸಿದ್ದು ವಿರುದ್ಧ ದೂರು ಕೊಡ್ತಾರಾ ಡಿಕೆಶಿ..?

Spread the love

ಬೆಂಗಳೂರು: ಉಪ ಚುನಾವಣೆ ನಡೆದ ಎರಡೇ ದಿನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. 2 ಕ್ಷೇತ್ರಗಳ ಫಲಿತಾಂಶ ಬರೋದಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇರುವಂತೆ ಕೆಪಿಸಿಸಿ ಅಧ್ಯಕ್ಷರ ದಿಢೀರ್ ದೆಹಲಿ ಪ್ರವಾಸ ಅಚ್ಚರಿ ಮೂಡಿಸಿದೆ.

ಉಪ ಚುನಾವಣೆಯ ಹೊತ್ತಲ್ಲಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ಹೇಳಿಕೆಗಳ ಬಗ್ಗೆ ಹೈಕಮಾಂಡ್‍ಗೆ ದೂರು ನೀಡುವ ನಿರೀಕ್ಷೆ ಇದೆ. ಇದರಿಂದ ಪಕ್ಷದಲ್ಲಿ ಸಮನ್ವಯತೆ ಇಲ್ಲ ಎಂದು ಬಿಂಬಿತವಾಗಿದೆ. ಪಕ್ಷದೊಳಗೆ ಭಿನ್ನಾಭಿಪ್ರಾಯ ತೀವ್ರಗೊಳ್ಳುವುದಕ್ಕೂ ಕಾರಣ ಆಗಬಹುದು. 

ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಗಾದಿ ಬಗ್ಗೆ ಈಗ ಬಹಿರಂಗ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಮತ್ತು ಮತ್ತವರ ಕಡೆಯವರಿಗೆ ಸೂಚಿಸಿ ಎಂದು ಹೈಕಮಾಂಡ್‍ಗೆ ಡಿಕೆಶಿ ಮನವಿ ಮಾಡುವ ನಿರೀಕ್ಷೆ ಇದೆ.


Spread the love

About Laxminews 24x7

Check Also

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Spread the loveಬೆಂಗಳೂರು:  ಸುರಿದ ಭಾರೀ ಮಳೆಗೆ ನಡೆದ ಅವಾಂತರಗಳು ಒಂದಾ.. ಎರಡಾ..? ಬೇಸಿಗೆ ಮಳೆಗೆ ಇಡೀ ಸಿಲಿಕಾನ್ ಸಿಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ