Breaking News

ಗ್ರಾಮ ಪಂಚಾಯಿತಿ ಚುನಾವಣೆ2021 ಫೆಬ್ರವರಿಗೆ ಮುಂದೂಡುವ ಸಾಧ್ಯತೆ

Spread the love

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಡಿಸೆಂಬರನಲ್ಲಿ ನಡೆಯಬೇಕಿತ್ತು. ಡಾ.ಎಂ.ಕೆ.ಸುದರ್ಶನ್ ನೇತೃತ್ವದ ತಜ್ಞರ ಸಮಿತಿ ಚುನಾವಣೆ ನಡೆಸುವುದು ಅಪಾಯಕಾರಿ ಎಂದು ವರದಿ ಸಲ್ಲಿಸಿದೆ. ಆದ ಕಾರಣ 2021 ಫೆಬ್ರವರಿಗೆ ಮುಂದೂಡುವ ಸಾಧ್ಯತೆ ಇದೆ.

ತಜ್ಞರ ಸಮಿತಿಯೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದು ಈ ವೇಳೆ ನಡೆಸುವುದು ಸೂಕ್ತವಲ್ಲ ಎಂಬ ವರದಿ ನೀಡಿರುವುದರಿಂದ ರಾಜ್ಯ ಸರ್ಕಾರ, ಚುನಾವಣಾ ಆಯೋಗ ಮತ್ತು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ಮುಂದಾಗಿದೆ. 

ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಚುನಾವಣೆ ನಡೆಸಿದ್ದೇ ಆದರೆ ಕೊರೋನಾ ಸೋಂಕನ್ನು ಮನೆ ಬಾಗಿಲಿಗೆ ತಂದು ಕೂರಿಸಿದಂತಾಗುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಸರ್ಕಾರದ ಮೂಲಗಳು ತಿಳಿಸಿವೆ.

ಹೀಗಾಗಿ ಬಹುನಿರೀಕ್ಷಿತ ಗ್ರಾಮ ಪಂಚಾಯಿತಿ ಚುನಾವಣೆ ಈ ವರ್ಷದ ಅಂತ್ಯದೊಳಗೆ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ