Breaking News

ಬೆಂಗಳೂರಲ್ಲಿ6 ಕಡೆ ಎಸಿಬಿ ದಾಳಿ…………….

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಕೆಲ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.

ಕೆಎಎಸ್ ಅಧಿಕಾರಿ ಡಾ. ಸುಧಾ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಇರುವ ಮನೆ ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೊತೆಗೆ, ಉಡುಪಿ ಜಿಲ್ಲೆಯ ಹೆಬ್ರಿ ಬಳಿಯ ತೆಂಕಬಟ್ಟಿನ ಮನೆ ಮೇಲೂ ದಾಳಿ ನಡೆಸಲಾಗಿದೆ.

ಈ ಹಿಂದೆ ಬಿಡಿಎನಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಡಾ. ಬಿ. ಸುಧಾ ಅವರ ವಿರುದ್ಧ ಎಸಿಬಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಹಾಗೂ ಅವ್ಯವಹಾರದ ಕುರಿತಾಗಿ ದೂರು ದಾಖಲಾಗಿತ್ತು. ಸುಧಾ ಪ್ರಸ್ತುತ ಜೈವಿಕ ತಂತ್ರಜ್ಞಾನ ಇಲಾಖೆಯಲ್ಲಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಡಾ. ಸುಧಾ ಭೂ ಪರಿಹಾರ ನೀಡುವ ವಿಚಾರದಲ್ಲಿ ತಮ್ಮ ಗಂಡ ಮತ್ತು ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ದರು. ಅಲ್ಲದೆ, ತಮ್ಮ ಸಂಬಳಕ್ಕಿಂತಲೂ ಆದಾಯದ ಮೊತ್ತ ಜಾಸ್ತಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಲಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ